ನವದೆಹಲಿ:ಬೀದರ್​ ಲೋಕಸಭಾ ಕ್ಷೇತ್ರದಿಂದ 26ನೇ ವಯಸ್ಸಿನಲ್ಲೇ ಸಂಸದನಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಂಸದ ಸಂಸದ ಸಾಗರ್ ಈಶ್ವರ ಖಂಡ್ರೆ ಅವರು ನೂತನ ಸಂಸತ್ ಭವನದಲ್ಲಿ ಇಂದು ಆರಂಭಗೊಂಡ ಲೋಕಸಭಾ ಅಧಿವೇಶನದಲ್ಲಿ ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ:ಹಂಗಾಮಿ ಸ್ಪೀಕರ್ ವಿವಾದ: ಸಂಸತ್ತಿನ ಹೊರಗೆ ಸಂವಿಧಾನ ಪುಸ್ತಕ ಹಿಡಿದು ಪ್ರತಿಭಟನೆ ನಡೆಸಿದ ಇಂಡಿಯಾ ಬಣ!
ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಕನ್ನಡದಲ್ಲಿ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾಧ್ಯಕ್ಷರ ಸ್ಥಾನದಲ್ಲಿದ್ದ ಭತೃಹರಿ ಮಹತಾಬ್ ಅವರು ಯುವ ಸಂಸತ್ ಸದಸ್ಯ ಸಾಗರ್ ಈಶ್ವರ ಖಂಡ್ರೆ ಅವರಿಗೆ ಕೈಕುಲುಕಿ ಅಭಿನಂದನೆ ಸಲ್ಲಿಸಿದರು.
ತಮ್ಮ ಹೆಸರನ್ನು ಪೂರ್ತಿಯಾಗಿ ಸಾಗರ್ ಈಶ್ವರ ಖಂಡ್ರೆ ಅಂತ ಹೇಳುವ ಅವರು, ನಾನು ಲೋಕಸಭಾ ಸದಸ್ಯನಾಗಿ ಚುನಾಯಿತನಾಗಿ, ಕಾನೂನು ಮೂಲಕ ಸ್ಥಾಪಿಸಲ್ಪಟ್ಟಿರುವ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುವೆನೆಂದು ಮತ್ತು ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆನೆಂದು ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಹೇಳಿದರು.
ನಟ ದರ್ಶನ್‌ ಗ್ಯಾಂಗ್‌ಗೆ ಬಿಗ್‌ ಶಾಕ್: ನಾಲ್ವರು ಮಾತ್ರ ಬೇರೆ ತುಮಕೂರು ಜೈಲಿಗೆ ಶಿಫ್ಟ್! ಕಾರಣ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
