ಬೆಂಗಳೂರು:ಏಳನೇ ವೇತನ ಆಯೋಗದ ಪೂರ್ಣ ಪ್ರಮಾಣದ ಫಲ ಪಡೆಯಲು ಸರ್ಕಾರಿ ನೌಕರರು ಇನ್ನೂ ಕೆಲ ತಿಂಗಳು ಕಾಯಬೇಕಿದೆ. ವರದಿ ಸಲ್ಲಿಸಲು ಆಯೋಗಕ್ಕೆ ಮತ್ತೆ ಆರು ತಿಂಗಳು ಗಡುವು ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಅಂತಿಮ ವರದಿ ಸಲ್ಲಿಸಬೇಕಾಗಿದ್ದ ಗಡುವು ನವೆಂಬರ್​ವರೆಗೆ ವಿಸ್ತರಣೆಯಾಗಿದೆ.
ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳ್ಳುವ ಸಂದರ್ಭದಲ್ಲಿ ಆಯೋಗದಿಂದ ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಿತ್ತು. ಮೇ 19ರ ಒಳಗೆ ಆಯೋಗ ಅಂತಿಮ ವರದಿ ಸಲ್ಲಿಸಬೇಕಿತ್ತು. ಆದರೆ, ಅವಧಿ ವಿಸ್ತರಿಸಿರುವುದು 7ನೇ ವೇತನ ಆಯೋಗದ ಪೂರ್ಣ ಪ್ರಮಾಣದ ವೇತನ ನಿರೀಕ್ಷೆಯಲ್ಲಿದ್ದ ಅಧಿಕಾರಿ/ನೌಕರರಿಗೆ ನಿರಾಸೆ ಉಂಟು ಮಾಡಿದೆ.
ವೇತನ ಆಯೋಗದಲ್ಲಿ ಯಾರಿದ್ದಾರೆ?:ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ಲೆಕ್ಕ ಪರಿಶೋಧನೆ ಮತ್ತು ಖಾತೆಗಳ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನವಳ್ಳಿ ಸದಸ್ಯ ಮತ್ತು ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸಮಿತಿ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಯಸಾಧು ವರದಿ:7ನೇ ವೇತನ ಆಯೋಗ ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ಅಂದರೆ ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತುಪಡಿಸಿ ಉಳಿದವರ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸುತ್ತದೆ. ಕಾರ್ಯಸಾಧು ನೂತನ ವೇತನ ಶ್ರೇಣಿಯನ್ನೂ ಆಯೋಗವು ಶಿಫಾರಸು ಮಾಡುತ್ತದೆ.
ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​ ಪೈಪೋಟಿ ಮಧ್ಯೆ ಸಿಎಂ ಸ್ಥಾನಕ್ಕೆ ಮತ್ತೊಬ್ಬರು ಆಕಾಂಕ್ಷಿ!

ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − three =
Remember me
