ಬೆಂಗಳೂರು:ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ NHM ಗುತ್ತಿಗೆ ನೌಕರರ ವೇತನ ಹೆಚ್ಚಿಸುವಂತೆ ಸರ್ಕಾರ ಆದೇಶ ಹೊರಡಿಲಾಗಿದೆ. ಗರಿಷ್ಟ  ಶೇ15 ರಷ್ಟು ವೇತನ ಹೆಚ್ಚಳ ಮಾಡುವಂತೆ ಸರ್ಕಾರ ಆದೇಶ ಮಾಡಿದ್ದು ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಸಚಿವರಾಗಿರುವ ಡಾ| ಕೆ ಸುಧಾಕರ್ ತಮ್ಮ ಟ್ವೀಟ್ ನಲ್ಲಿ ‘ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ’ ಎಂದು ಬರೆದುಕೊಂಡಿದ್ದಾರೆ.
ವೇತನ ಹೆಚ್ಚಳದ ಆದೇಶ ಎಪ್ರಿಲ್ 1ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು ಬಹು ದಿನಗಳ ಬೇಡಿಕೆ ಈಡೇರಿಸಿದಂತಾಗಿದೆ. ಇನ್ನು ಎಷ್ಟು ವರ್ಷಗಳ ಅನುಭವ ಇದೆ ಎನ್ನುವ ಆಧಾರದ ಮೇಲೂ ವೇತನ ಹೆಚ್ಚಳದ ವಿಂಗಡಣೆ ಮಾಡಲಾಗಿದ್ದು  3 ರಿಂದ 5 ವರ್ಷ ಸೇವೆ ಸಲ್ಲಿಸಿರುವವರಿಗೆ ಶೇ 5 ರಷ್ಟು, 5 ರಿಂದ 10 ವರ್ಷ ಸೇವೆ ಸಲ್ಲಿಸಿರುವರಿಗೆ ಶೇ10 ಪರ್ಸೆರಂಟ್, 10 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿದವರಿಗೆ ಶೇ15 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ.1/2pic.twitter.com/oAhhHcl8aC
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − one =
Remember me
