ಬೆಂಗಳೂರು:ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಗ್ರಂಥಪಾಲಕ ಹಾಗೂ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಜತೆಗೆ ಇತರೆ ಭತ್ಯೆಗಳನ್ನು ನೀಡುವ ಮೂಲಕ ನೌಕರರ ಕುಟುಂಬಗಳಿಗೆ ಜೀವನಾಧಾರ ಕಲ್ಪಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮೇಲ್ವಿಚಾರಕರ ನೌಕರರ ಸಂಘ ಅಭಿನಂದಿಸಿದೆ.
ಕಳೆದ 35 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತಮ್ಮ ಬೇಡಿಕೆಯನ್ನು ಈಡೇರಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ರಾಜ್ಯದ ಎಲ್ಲ ಗ್ರಂಥಪಾಲಕರ ಹಾಗೂ ಅವರ ಕುಟುಂಬದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಂದು ಸಂಘದ ರಾಜ್ಯಾಧ್ಯಕ್ಷ ಸದಾನಂದ ಪೂಜಾರಿ ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ 5,622 ಗ್ರಾಪಂ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೆರಿಸುವ ಸಚಿವರ ನಿರ್ಧಾರವನ್ನು ಸಂಘ ಸ್ವಾಗತಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − sixteen =
Remember me
