ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮತ ಎಣಿಕೆಗೆ ಅಗತ್ಯ ಇರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಲ್ಲಾ ಪಕ್ಷದ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಹೀಗಿರುವಾಗ ಬೆಂಗಳೂರಿನಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.
ನಾಳೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ ಎಣಿಕೆ ಹಿನ್ನಲೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು, ಹೀಗಾಗಿ ನಾಳೆ ಬೆಳಗ್ಗೆಯಿಂದಲೇ ಬಾರ್ ರೆಸ್ಟೋರೆಂಟ್ ಗಳು ಬಂದ್​​ ಇರಲಿವೆ.
ಇದನ್ನೂ ಓದಿ: ಚುನಾವಣಾ ಫಲಿತಾಂಶಕ್ಕೂ ಮೊದಲೇ ಶಾಸಕರ ನಾಮಫಲಕ ತಂದ ಜೆಡಿಎಸ್ ಅಭ್ಯರ್ಥಿ!
ಬಾರ್ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಊಟ ಮಾಡಲು ಅವಕಾಶ ಇರುತ್ತದೆ. ಆದರೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನಲೆ ಮತ ಎಣಿಕೆ ಕೇಂದ್ರಗಳನ್ನೊಳಗೊಂಡು ಬೆಂಗಳೂರಿನಾದ್ಯಂತ ನಾಳೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ.
ಮೊದಲ ಬಾರಿಯ ಫೋಟೋಶೂಟ್​​​ನಲ್ಲಿ ಕಣ್ಣೀರಿಟ್ಟಿದ್ದ ನಟಿ ಕೃತಿ ಸನೋನ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
