ಬೆಂಗಳೂರು:ರಾಜ್ಯದಲ್ಲಿನ ಶಾಲಾ ಮಕ್ಕಳ ಪಠ್ಯ ಪುಸ್ತಕವನ್ನು ಪರಿಷ್ಕರಿಸಿ, ಮಕ್ಕಳಿಗೆ ಹೊಸ ಪುಸ್ತಕಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾನ ಮನಸ್ಕರ ಒಕ್ಕೂಟ ಮನವಿ ಮಾಡಿಕೊಂಡಿದೆ.
ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್​.ಜಿ.ಸಿದ್ದರಾಮಯ್ಯ ನೇತೃತ್ವದ, ಪ್ರೊ.ರವಿವರ್ಮಕುಮಾರ್, ಪ್ರೊ.ರಾಜೇಂದ್ರ ಚಿನ್ನಿ, ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್​ ಬಾಬು, ಪ್ರೊ.ಎಲ್.ಎನ್.ಮುಕುಂದರಾಜ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ಡಾ.ವಸುಂಧರಾ ಭೂಪತಿ, ಡಾ.ನಿರಂಜನಾರಾಧ್ಯ ಮುಂತಾದವರನ್ನು ಒಳಗೊಂಡ ಈ ಒಕ್ಕೂಟ ಸಭೆ ನಡೆಸಿ, ಸುದೀರ್ಘ ಪತ್ರದ ಮುಖೇನ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣವಾಗಲಿ: ನಟ-ನಿರ್ದೇಶಕ ರಿಷಬ್ ಶೆಟ್ಟಿ
ಹಿಂದಿನ ಸರ್ಕಾರ ಶಿಕ್ಷಣವನ್ನು ಸಂಪೂರ್ಣವಾಗಿ ರಾಜಕಾರಣಕ್ಕೆ ಬಳಸಿಕೊಳ್ಳುವ ಮೂಲಕ ಹಾಳು ಮಾಡಿದ್ದಲ್ಲದೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು . ಪೊಳ್ಳು ರಾಷ್ಟ್ರೀಯತೆಯ ಹೆಸರಿನಲ್ಲಿ ಎಳೆ ಮಕ್ಕಳಿಗೆ ವಿಷ ಉಣಿಸುವ ಕೆಲಸ ಮಾಡಿತ್ತು. ಹೀಗಾಗಿ ಈಗಾಗಲೇ ಮುದ್ರಿತವಾಗಿ ಬಿಇಒ ಕಚೇರಿ/ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಯಥಾವತ್ತಾಗಿ ಮಕ್ಕಳಿಗೆ ವಿತರಿಸದಿರಲು ಸ್ಪಷ್ಟ ಸೂಚನೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಬೇಕು ಎಂದು ಒಕ್ಕೂಟ ಮನವಿ ಮಾಡಿಕೊಂಡಿದೆ.
ಇದನ್ನೂ ಓದಿ:ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ
ಮಾತ್ರವಲ್ಲ ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ತೆಗೆದು ಹಾಕಿ ವಿತರಿಸಲು ಆಯಾ ವ್ಯಾಪ್ತಿಯ ಸಿಆರ್​ಪಿ ಮತ್ತು ಶಾಲೆಯ ಶಿಕ್ಷಕರನ್ನು ಹೊಣೆ ಮಾಡಬೇಕು. ಜೊತೆಗೆ, ಈ ವಿಷಯಗಳನ್ನು ಕಲಿಕೆ ಮತ್ತು ಮೌಲ್ಯಮಾಪನದಿಂದ ಕೈಬಿಡಲು ಸ್ಪಷ್ಟ ಸೂಚನೆ ನೀಡಬೇಕು. ಅಲ್ಲದೆ ಈ ಎಲ್ಲಾ ಪುಸ್ತಕಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಒಕ್ಕೂಟ ಕೋರಿಕೊಂಡಿದೆ.

ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?

ಒಂಟಿಯಾಗಿದ್ದ, 3 ಮಕ್ಕಳ ವೃದ್ಧತಾಯಿ ಕೋಣೆಯಲ್ಲಿ ಶವವಾಗಿ ಪತ್ತೆ!; ಪ್ರಕರಣ ಸಂಬಂಧ 5 ತಂಡಗಳ ರಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 16 =
Remember me
