ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೇರೆ ಅಲ್ಲ, ಸ್ವಾಮಿ ವಿವೇಕಾನಂದರು ಬೇರೆ ಅಲ್ಲ. ಅದೇ ವಿವೇಕಾನಂದರೇ ಮೋದಿಯ ರೂಪದಲ್ಲಿ ಜನ್ಮ ತಳೆದಿದ್ದಾರೆ ಮಾತ್ರವಲ್ಲ, ಅವರು ಶ್ರೀರಾಮನಸ್ವರೂಪ ಎಂಬ ಅಭಿಪ್ರಾಯ ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ವ್ಯಕ್ತವಾಗಿದೆ.
ತುಮಕೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಭಾಷಣದಲ್ಲಿ ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೋರ್ಚಾದ ಸೇವೆಯನ್ನು ಭಾರತೀಯ ಜನತಾ ಪಕ್ಷ ಯಾವತ್ತೂ ಮರೆತಿಲ್ಲ ಎಂದ ಅವರು ನಂತರ ವಿವೇಕಾನಂದರ ಕುರಿತು ಮಾತನಾಡುತ್ತ ಈ ಹೋಲಿಕೆಯನ್ನು ಮಾಡಿದ್ದಾರೆ.
ಇದನ್ನೂ ಓದಿ:ಶಾಲೆಯಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ್ಲು 8ನೇ ತರಗತಿ ವಿದ್ಯಾರ್ಥಿನಿ
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ನಂತರ ದೈವೀಪುರುಷ ಸಿಕ್ಕಿದ್ದಾರೆ. ನಾವೆಲ್ಲ ಸ್ವಾಮಿ ವಿವೇಕಾನಂದ ಅವರನ್ನು ನೋಡಿಲ್ಲ. ಸ್ವಾಮಿ ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರ. ಅದೇ ವಿವೇಕಾನಂದರು ಮತ್ತೊಂದು ಜನ್ಮ ತಾಳಿ ಮೋದಿಯವರ ರೂಪದಲ್ಲಿ ಬಂದಿದ್ದಾರೆ ಎಂದು ನನಗೆ ಅನಿಸುತ್ತಿದೆ ಎಂದು ಜೊಲ್ಲೆ ಹೇಳಿದ್ದಾರೆ.
ರಾಮಾಯಣದಲ್ಲಿ ರಾಮನ ಸೇವೆಗೆ ವಾನರ ಸೇನೆ ಇತ್ತು. ಈಗ ನಾವು ಮಹಿಳಾ ಮೋರ್ಚಾ ಮೂಲಕ ರಾಮಸ್ವರೂಪನಾದ ಮೋದಿ ಅವರ ಕಾರ್ಯಸಾಧನೆಗೆ ಸೇವೆ ಸಲ್ಲಿಸಬೇಕಿದೆ ಎಂದೂ ಅವರು ಹೇಳಿದರು.
‘ಓಂ’ ಇದ್ದ ಹಾಳೆಯಲ್ಲಿ ಶುಭಾಶಯ ಬರೆಯಲು ಒಪ್ಪದ ತನ್ವೀರ್ ಸೇಠ್!; ಕನ್ನಡ ಮತ್ತು ಸಂಸ್ಕೃತಿ ಸಚಿವರ ಎದುರೇ ತಕರಾರು

ಪೈಲಟ್ ಕೆಲಸಕ್ಕೇ ಮುಳುವಾದ ‘ಮೂತ್ರ ವಿಸರ್ಜನೆ’; ಏರ್​ ಇಂಡಿಯಾದ ಪ್ರಕರಣ ‘ಒಂದಕ್ಕೆ’ 30 ಲಕ್ಷ ರೂ. ದಂಡ

‘ಸತ್ತು ಹೋದವ’ ಸತ್ತ ಮರುದಿನವೇ ತಾನು ಮೃತಪಟ್ಟಿದ್ದ ಆ ಸ್ಥಳದಲ್ಲೇ ಮತ್ತೆ ಕಾಣಿಸಿಕೊಂಡಿದ್ದ!; ಆಗಿದ್ದಾದರೂ ಏನು, ಏಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
