ಹಾವೇರಿ:ಈ ತಾಲೂಕಿನಲ್ಲಿ ಮೂರು ವಾರಗಳ ಹಿಂದೆ ಒಂದು ಅವಘಡ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಮೊಹಮದ್​ ಗೌಸ್ ಬೇವಿನಮರದ (20) ಸಾವಿಗೀಡಾದ ಯುವಕ. ಈತ ಮನೆ ನಿರ್ಮಾಣ ಕಾರ್ಯದಲ್ಲಿ ನಿರತನಾಗಿದ್ದಾಗ ಈ ದುರಂತ ಸಂಭವಿಸಿದೆ. ಗದಿಗೆಪ್ಪ ಪುಟ್ಟಪ್ಪ ಇಟಗಿ ಎಂಬವರ ಮನೆ ನಿರ್ಮಾಣದಲ್ಲಿ ತೊಡಗಿಸದ್ದ ಈತ ಕಟ್ಟಡದ ಮೇಲೆ ಬಾರ್ ಬೆಂಡಿಗ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶವಾಗಿ ಸಾವಿಗೀಡಾಗಿದ್ದಾನೆ. ಗಾಯಗೊಂಡಿದ್ದ ಈತನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಲಾರಿ ಮೇಲೆ ಹತ್ತಿದ ಚಾಲಕ ಅಲ್ಲೇ ಸಾವು; ಸುತ್ತಲಿದ್ದ ಜನರ ಕಣ್ಮುಂದೆಯೇ ದುರ್ಮರಣ
ಹಾವೇರಿ ತಾಲೂಕಿನ ಕೂರಗುಂದ ಗ್ರಾಮದಲ್ಲಿ ಆ. 14ರಂದು ಕೂಡ ಇಂಥದ್ದೇ ಒಂದು ಪ್ರಕರಣ ಸಂಭವಿಸಿತ್ತು. ಲಾರಿ ಚಾಲಕ, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಗ್ರಾಮದ ನಿವಾಸಿ ಶೇಬುಲ್ಲಾ (23) ಎಂಬಾತ ಹಾವೇರಿಯ ಕೂರಗುಂದ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಹೂಕೋಸು ತುಂಬಿಕೊಂಡು ವಾಹನದ ಮೇಲೆ ಹತ್ತಿದ್ದು, ಆಗ ಅಲ್ಲಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದ. ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
‘ಸಾಯೋವರೆಗೂ ಹುಕ್ಕೇರಿಗೆ ನಾನೇ ಎಂಎಲ್​ಎ..’ ಎಂದಿದ್ದ ಉಮೇಶ್ ಕತ್ತಿ: ವಿಜಯವಾಣಿಗೆ ನೀಡಿದ್ದ ಕೊನೇ ಸಂದರ್ಶನ..

62 ವರ್ಷಗಳ ಹಿಂದೆ ಕಳವಾಗಿದ್ದ ನಟರಾಜ ಮೂರ್ತಿ ನ್ಯೂಯಾರ್ಕ್​ನಲ್ಲಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
