ಬೆಂಗಳೂರು:ಕರ್ನಾಟಕ ಸಮುದಾಯ ಆರೋಗ್ಯ ಸಂಸ್ಥೆ ವತಿಯಿಂದ ನೀಡಲಾಗುವ 2023ನೇ ಸಾಲಿನ ‘ಸಮೃದ್ಧ ಸಮುದಾಯ ಆರೋಗ್ಯ ಸಾಹಿತ್ಯ ಪ್ರಶಸಿ’್ತಗೆ ಆಯುರ್ವೇದ ವೈದ್ಯೆ ಹಾಗೂ ಸಾಹಿತಿ ಡಾ. ವಸುಂಧರಾ ಭೂಪತಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯನ್ನು ಆ. 11ರಂದು ನಗರದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ವೈದ್ಯ ಸಾಹಿತ್ಯದಲ್ಲಿನ ಗಣನೀಯ ಸೇವೆ ಸಲ್ಲಿಸಿದ ಒಬ್ಬರಿಗೆ ಪ್ರತಿ ವರ್ಷ ಸಂಸ್ಥೆ ಈ ಪ್ರಶಸ್ತಿ ನೀಡುತ್ತಾ ಬಂದಿದೆ.
ಡಾ. ವಸುಂಧರಾ ಭೂಪತಿ ವೈದ್ಯಯಾಗಿ ಮಾತ್ರವಲ್ಲದೆ ಸಾಹಿತ್ಯ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವೈದ್ಯಕೀಯ ವಿಷಯಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದಾರೆ. ಪ್ರಮುಖ ಪತ್ರಿಕೆಗಳಲ್ಲಿ ಅಂಕಣಗಳನ್ನೂ ಬರೆದಿದ್ದಾರೆ. ವೈದ್ಯ ಸಾಹಿತ್ಯದ ಅವರ ಕೊಡುಗೆ ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ. ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − six =
Remember me
