ಬೆಂಗಳೂರು:ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ವಿಶ್ವಕ್ಕೆ ಸಾರುವ ಧ್ಯೇಯದೊಂದಿಗೆ ನ.19ರಂದು ದುಬೈನಲ್ಲಿ ‘ವಿಶ್ವ ಕನ್ನಡ ಹಬ್ಬ’ ಹಮ್ಮಿಕೊಳ್ಳಲಾಗಿದೆ.
ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್​​ವುಡ್​​ನ ನಟ-ನಟಿಯರು, ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ​​ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ‘ವಿಶ್ವ ಕನ್ನಡ ಹಬ್ಬ’ದಲ್ಲಿ ದುಬೈನಲ್ಲಿರುವ ಕನ್ನಡಿಗರೂ ಪಾಲ್ಗೊಳ್ಳಲಿದ್ದಾರೆ. ಇದೇ ವೇದಿಕೆಯಲ್ಲಿ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ, ನಾಡು-ನುಡಿಗಾಗಿ ಶ್ರಮಿಸಿದ ಗಣ್ಯರಿಗೆ ವಿಶ್ವಮಾನ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
‘ವಿಶ್ವ ಕನ್ನಡ ಹಬ್ಬ’ವನ್ನು ಸಚಿವ ಎಸ್.ಟಿ ಸೋಮಶೇಖರ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​​, ನಟ ಶಿವರಾಜ್​ಕುಮಾರ್​​, ಶ್ರೀ ಆನಂದ್ ಗುರೂಜಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ನಟ ವಿಜಯ್ ರಾಘವೇಂದ್ರ ಮಾಡಲಿದ್ದಾರೆ.
‘ವಿಶ್ವ ಕನ್ನಡ ಹಬ್ಬ’ದ ಹಿನ್ನೆಲೆ ಇಂದು ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಿವರಾಜ್ ಕುಮಾರ್, ಪ್ರೇಮಾ, ಸುಧಾರಾಣಿ, ವಸಿಷ್ಟ ಸಿಂಹ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
