ಬೆಂಗಳೂರು:ಶ್ರೀಗಂಧ ನೀತಿಗೆ ಬದಲಾವಣೆ ತರಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಪ್ರತಿನಿಧಿಗಳ ನಿಯೋಗದ ಅಹವಾಲು ಆಲಿಸಿ, ಶ್ರೀಗಂಧ ಬೆಳೆಗಾರರ ಸಮಸ್ಯೆ ಪರಿಹರಿಸಲು ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ರೈತರು ತಮ್ಮ ಜಮೀನಿನಲ್ಲಿ ಬೆಳೆಯುವ ಶ್ರೀಗಂಧದ ಮರಗಳ ರಕ್ಷಣೆ, ಕಟಾವು ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಇರುವ ತೊಡಕು ನಿವಾರಿಸುವ ನಿಟ್ಟಿನಲ್ಲಿ ಶೀಘ್ರವೇ ಸಂಬಂದಿಸಿದ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದರು.ಖಾಸಗಿ ಜಮೀನಿನಲ್ಲಿ ಬೆಳೆದ ಶ್ರೀಗಂಧದ ಮರಗಳ ಕಳವು ಪ್ರಕರಣಗಳು ನಡೆದಾಗ ಅರಣ್ಯ ಇಲಾಖೆಯೇ ದೂರು ದಾಖಲಿಸಿಕೊಳ್ಳುವ ಕುರಿತಂತೆ ಸೂಚನೆ ನೀಡುವುದಾಗಿ ಆಶ್ವಾಸನೆ ನೀಡಿದರು.ಬಿದಿರು ಬೆಳೆಗೆ ಪ್ರೋತ್ಸಹ ಧನ ನೀಡುವ ಯೋಜನೆ ಇದ್ದರೂ ಅರಣ್ಯ ಇಲಾಖೆ ಉತ್ತೇಜನ ನೀಡುತ್ತಿಲ್ಲ ಎಂಬ ದೂರಿಗೆ ಸ್ಪಂದಿಸಿದ ಸಚಿವರು ಈ ಸಂಬಂಧ ವಿಚಾರಣೆ ನಡೆಸಿ ಪರಿಹಾರ ಒದಗಿಸುವುದಾಗಿ ತಿಳಿಸಿದರು.ರೈತರಿಗೆ ವಿವಿಧ ಪ್ರಭೇದದ ಸಸಿಗಳನ್ನು ಏಕ ಗವಾಕ್ಷಿ ಯೋಜನೆ ಅಡಿಯಲ್ಲಿ ವಿತರಿಸಬೇಕು ಎಂಬ ನಿಯೋಗದ ಬೇಡಿಕೆಯ ಕುರಿತಂತೆ ತೋಟಗಾರಿಕೆ ಇಲಾಖೆಯೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.ಶ್ರೀಗಂಧದ ಬೆಳೆದ ಜಮೀನನ್ನು ಸರ್ಕಾರ ರಸ್ತೆ, ಸೇತುವೆ ಇತ್ಯಾದಿ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ ಶ್ರೀಗಂಧ ಮರಗಳ ಮೌಲ್ಯೀಕರಣದಲ್ಲೂ ಸಮಸ್ಯೆಗಳಿರುವ ಕುರಿತಂತೆ ರೈತರ ಸಮಸ್ಯೆ ಆಲಿಸಿದ ಸಚಿವರು ಮರು ಮೌಲ್ಯೀಕರಣ ದರ ನಿಗದಿ ಪಡಿಸುವ ಕುರಿತಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಮಳವಳ್ಳಿಯ ಅರಣ್ಯ ಇಲಾಖೆಯ ನರ್ಸರಿಗಳಲ್ಲಿ ಕಳಪೆ ಗುಣಮಟ್ಟದ ಶ್ರೀಗಂಧದ ಸಸಿ ಬೆಳೆಸಲಾಗಿದೆ. ರೈತರು ಖರೀದಿಸಲು ನಿರಾಕರಿಸಿದರೂ ಬಲವಂತವಾಗಿ ಈ ಸಸಿಗಳನ್ನು ನೀಡಲಾಗುತ್ತಿದೆ ಎಂಬ ದೂರನ್ನು ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದರು.ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ರಾಜೀವ್ ರಂಜನ್, ಅರಣ್ಯ ಸಂಪನ್ಮೂಲ ನಿರ್ವಹಣಾ ವಿಭಾಗದ ಎ.ಪಿ.ಸಿ.ಸಿ.ಎ್. ವನಶ್ರೀ ವಿಪಿನ್ ಸಿಂಗ್, ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷ ಅಮರ ನಾರಾಯಣ್ ಮತ್ತಿತರರು ಪಾಲ್ಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + three =
Remember me
