ಬೆಂಗಳೂರು: ಖ್ಯಾತ ಚಿತ್ರಕಲಾವಿದ ಯೂಸುಫ್ ಆರಕ್ಕಲ್ ಅವರ ಚಿತ್ರ ಕಲಾಕೃತಿಗಳು ಹಾಗೂ ಅವರ ಪುತ್ರ ಶಿಬು ಆರಕ್ಕಲ್ ಅವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನವನ್ನು ಸಂದೀಪ್ ಗೀತಾಂಜಲಿ ಮೈನಿ ಫೌಂಡಶನ್ ಆಯೋಜಿಸಿದೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ, 7ನೇ ಅಡ್ಡರಸ್ತೆಯಲ್ಲಿರುವ ಫೌಂಡೇಶನ್ ಆವರಣ ಮೈನಿ ಸದನ್‌ನಲ್ಲಿ ಆರಂಭವಾಗಿರುವ ಚಿತ್ರಕಲಾಕೃತಿಗಳ ಪ್ರದರ್ಶನವು ಜು.10 ರವರೆಗೆ ನಡೆಯಲಿದೆ.ಭಾರತದ ಜನಸಮುದಾಯದ ಆಧ್ಯಾತ್ಮಿಕ ಭಾಗವಾಗಿರುವ ಗಂಗಾನದಿಯ ಮಹತ್ವ ಮತ್ತು ಪಾತ್ರವನ್ನು ಪ್ರತಿಬಿಂಬಿಸುವ ವಿಶೇಷ ಪರಿಕಲ್ಪನೆಯಲ್ಲಿ ಈ ಪ್ರದರ್ಶನವನ್ನು ಆಯೋಜಿಸಲಾಗಿದೆ. ಮಲ್ಲಾ ಎಂದು ಕರೆಯಲ್ಪಡುವ ದೋಣಿ ನಡೆಸುವ ಅಂಬಿಗರ ಸಂಪೂರ್ಣ ಜನಜೀವನ ಈ ಗಂಗಾ ಸರಣಿಯ ವಿಶೇಷ. ನದಿ, ದೋಣಿ, ಅಂಬಿಗರು ಎಲ್ಲವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ತಂದೆ ಯೂಸ್ು ಚಿತ್ರಕಲೆಯ ಜೊತೆಗೆ ಪುತ್ರ ಶಿಬು ಕ್ಯಾಮೆರಾದಲ್ಲಿ ಸೆರೆಹಿಡಿದಿರುವ ಚಿತ್ರಗಳು ಈ ಪ್ರದರ್ಶನದಲ್ಲಿ ಒಂದಕ್ಕೊಂದು ಪೈಪೋಟಿ ನೀಡುವಂತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − seven =
Remember me
