ವಿಜಯಪುರ: ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿವಾದ ತಣ್ಣಗಾಗುತ್ತಿದ್ದಂತೆ ಇದೀಗ ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಪ್ರಕ್ಷ್ಯುಬ್ಧ ವಾತಾವರಣ ಸೃಷ್ಟಿಯಾಗಿದೆ.
ಹಂಜಗಿ ಗ್ರಾಮದ ರಾಯಣ್ಣ ಸರ್ಕಲ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಬೃಹತ್ ಕಟೌಟ್​ಗೆ ದುಷ್ಕರ್ಮಿಗಳು ಕೆಸರು ಎರಚಿದ್ದಾರೆ. ಇದೇ ಕಟೌ‌ಟ್​ನಲ್ಲಿರುವ ಭಕ್ತ ಕನಕದಾಸರು, ಚೆನ್ನಮ್ಮ ಭಾವಚಿತ್ರಕ್ಕೂ ಕಿಡಿಗೇಡಿಗಳು ಕೆಸರು ಹಚ್ಚಿದ್ದಾರೆ.
ಇದನ್ನೂ ಓದಿರಿಆರ್​ಎಸ್​ಎಸ್​ ಶಿಬಿರಕ್ಕೆ ಪ್ರಣಬ್ ಮುಖರ್ಜಿ ಹೋಗಲೇಬಾರದಿತ್ತು; ಸಿದ್ದರಾಮಯ್ಯ
ಸಂಗೊಳ್ಳಿ ರಾಯಣ್ಣ, ಚೆನ್ನಮ್ಮ, ಭಕ್ತ ಕನಕದಾಸರ ಭಾವಚಿತ್ರ ಇರುವ ಕಟೌಟ್​ಗೆ ಕೆಸರು ಎರಚಿ ಅಪಮಾನ ಮಾಡಿರುವುದನ್ನು ಖಂಡಿಸಿ ಹಂಜಗಿ ಗ್ರಾಮಸ್ಥರು ರಾಯಣ್ಣನ ಕಟೌಟ್ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಕೆಸರು ಸ್ವಚ್ಛಗೊಳಿಸಿದರು. ಶೀಘ್ರವೇ ದುಷ್ಕರ್ಮಿಗಳನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.
ರಂಗೇರೇತ್ತಿದೆ ಹಳ್ಳಿ ಫೈಟ್​, ಗ್ರಾಪಂ ಚುನಾವಣೆ ಯಾವಾಗ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
