ಬೆಂಗಳೂರು:ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಕ್ರಾತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಸರಣಿ ಟ್ವೀಟ್​ ಮಾಡಿರುವ ಕುಮಾರಸ್ವಾಮಿ, ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿರಿಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ
ಎಂಇಎಸ್, ಶಿವಸೇನೆ ಅಥವಾ ಮತ್ತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್​ಡಿಕೆ ಎಚ್ಚರಿಸಿದ್ದಾರೆ.
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ.1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 28, 2020

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದಿರುವ ಕುಮಾರಸ್ವಾಮಿ, ಕನ್ನಡಿಗರೆಂದರೆ- ”ಸಾಧುಗೆ ಸಾಧು, ಮಾಧುರ್ಯಂಗೆ ಮಾಧುರ್ಯಂ, ಬಾಧಿಪ್ಪ ಕಲಿಗೆ ಕಲಿಯುಗವಿಪರೀತನ್…” ಎನ್ನುತ್ತ ಬಾದಾಮಿಯ ಕಪ್ಪೆ ಅರಭಟ್ಟನ ಶಾಸನದ ಬರಹವನ್ನು ಉಲ್ಲೇಖಿಸಿದ್ದಾರೆ.
ಕನ್ನಡಿಗರನ್ನು ಕೆಣಕಿದ ಮಹಾರಾಷ್ಟ್ರ ಪುಂಡರಿಗೆ ಲಾಠಿಏಟು!

ರಾಯಣ್ಣ-ಶಿವಾಜಿ ಪುತ್ಥಳಿ ಗಲಾಟೆ; ಸರ್ಕಾರಕ್ಕೆ ಸಲಹೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × one =
Remember me
