ಬೆಳಗಾವಿ:ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್​ನಲ್ಲಿ ಸ್ಥಳೀಯರ ವಿರೋಧದ ನಡುವೆಯೂ ರಾತ್ರೋರಾತ್ರಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.
ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹಲವು ವರ್ಷಗಳಿಂದ ರಾಯಣ್ಣನ ಪರಮ ಭಕ್ತರು ಹೋರಾಟ ಮಾಡುತ್ತ ಬಂದಿದ್ದರು. ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ಗುರುವಾರ ತಡರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು. ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಗುರವಾರ ದೊಡ್ಡ ಹೋರಾಟವೇ ನಡೆದಿತ್ತು. ಈ ಬಗ್ಗೆ ಆ.29ರಂದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಜಿಲ್ಲಾಡಳಿತ ಭರವಸೆ ನೀಡಿದ್ದರು.ಇದನ್ನೂ ಓದಿರಿಭಕ್ತರಿಗೆ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಗುಡ್ ನ್ಯೂಸ್
ಇತ್ತ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಈ ವೃತ್ತದಲ್ಲಿ ಶಿವಾಜಿ ಮೂರ್ತಿ ಇದೆ. ಸಂಗೊಳ್ಳಿ ರಾಯಣ್ಣರ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ಇಲ್ಲ, ಆದರೆ ಇದೇ ಸ್ಥಳದಲ್ಲೇ ಮಾಡಿದ್ದಕ್ಕಾಗಿ ವಿರೋಧ ಇದೆ ಎಂದು ಸ್ಥಳೀಯ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಗೊಳ್ಳಿ ‌ರಾಯಣ್ಣ ಮೂರ್ತಿ‌ ಬಳಿಗೆ ಕನ್ನಡ ಹೋರಾಟಗಾರರೂ ಜಮಾಯಿಸಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + nine =
Remember me
