ಬೆಂಗಳೂರು:ನಟಿ ಸಂಜನಾ ಗಲ್ರಾನಿ ಅಲಿಯಾಸ್‌ ಮಹಿರಾ ಇತ್ತೀಚೆಗೆ ತಮ್ಮ ಪತಿ ಹಾಗೂ ಮಗನೊಂದಿಗೆ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ ಹಾಗೂ ಮದೀನಾಗೆ ಭೇಟಿ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿವೆ.
ಸಂಜನಾ ಗಲ್ರಾನಿ ಮೆಕ್ಕಾ ಮದೀನಾ ಭೇಟಿಯ ವಿಡಿಯೋವನ್ನು ಅವರ ಯೂಟ್ಯೂಬ್‌ ಚಾನೆಲ್‌ ಮೂಲಕವಾಗಿ ಹಂಚಿಕೊಂಡಿದ್ದಾರೆ. ಜೊತೆಗೆ ಅಲ್ಲಿನ ರೀತಿ ರಿವಾಜುಗಳನ್ನು ಕೂಡಾ ವಿವರಿಸಿದ್ದಾರೆ.

ಮೇ 19 ರಂದು ಮಗ ಅಲಾರಿಕ್‌ ಮೊದಲ ವರ್ಷದ ಹುಟ್ಟುಹಬ್ಬವನ್ನು ಸಂಜನಾ ಗಲ್ರಾನಿ ಪವಿತ್ರ ಯಾತ್ರಾಸ್ಥಳ ಮೆಕ್ಕಾದಲ್ಲಿ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ. ಅಭಿಮಾನಿಗಳು ವಿಭಿನ್ನವಾಗಿ ಕಾಮೆಂಟ್​​ ಮಾಡುತ್ತಿದ್ದಾರೆ.
ಇದನ್ನೂ ಓದಿ:ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ
ಸಂಜನಾ ಗಲ್ರಾನಿ ಬೆಂಗಳೂರು ಮೂಲದ ವೈದ್ಯ ಅಜೀಜ್‌ ಪಾಷಾ ಅವರನ್ನು ಮದುವೆ ಆದ ನಂತರ 2018ರಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ತಮ್ಮ ಹೆಸರನ್ನು ಮಹಿರಾ ಎಂದು ಬದಲಿಸಿಕೊಂಡಿದ್ದಾರೆ. ಸಿನಿಮಾದಿಂದ ದೂರ ಉಳಿದಿರುವ ನಟಿ ಮಗು ಮತ್ತು ಕುಟುಂಬ ಎಂದು ಸಮಯ ಕಳೆಯುತ್ತಿದ್ದಾರೆ.
VIDEO | ಮೊದಲ ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nine =
Remember me
