ಬೆಂಗಳೂರು:‘ಮಾದಕ’ ನಟಿ ರಾಗಿಣಿ ದ್ವಿವೇದಿ ಜೈಲು ಸೇರಿದ ಬೆನ್ನಲ್ಲೇ ಬಹುಭಾಷಾ ನಟಿ ಸಂಜನಾ ಗಲ್ರಾನಿ ಅವರನ್ನು ಸೆ.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡ್ರಗ್ಸ್ ಕೇಸ್​ನಲ್ಲಿ ಸಂಜನಾ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸೆ.8ರ ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಸಂಜನಾ ಮನೆ ಮೇಲೆ ದಾಳಿ ನಡೆಸಿದ್ದರು. ಅಂದಿನಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ಸಂಜನಾರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಬುಧವಾರ ಸಂಜೆ 4ರ ಸುಮಾರಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಧೀಶರು ನಟಿ ಸಂಜನಾಗೆ 2 ದಿನ ಅಂದರೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.ಇದನ್ನೂ ಓದಿರಿ‘ನಂಗೆ ಸಂಜನಾನೂ ಗೊತ್ತಿಲ್ಲ, ರಾಗಿಣಿನೂ ಗೊತ್ತಿಲ್ಲ… ಗೊತ್ತಿರೋದು ನನ್ನ ಹೆಂಡ್ತಿ ಮಾತ್ರ’
ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇದೀಗ ಸಂಜನಾರನ್ನೂ ಇದೇ ಜೈಲಿಗೆ ಕರೆದೊಯ್ಯಲಾಗಿದೆ.
ಡ್ರಗ್ಸ್​ ಪೆಡ್ಲರ್​ ರಾಹುಲ್​, ಸಂಜನಾರ ರಾಖಿ ಬ್ರದರ್​. ಡ್ರಗ್ಸ್​ ಮಾಫಿಯಾದ ಪ್ರಮುಖ ಆರೋಪಿ ಕ್ಯಾಸಿನೋ ಶೇಖ್​ ಫಾಝಿಲ್​ನ ಪಾರ್ಟಿಗಳಲ್ಲಿ ಸಂಜನಾ ಪಾಲ್ಗೊಂಡಿದ್ದರು. ಡ್ರಗ್ಸ್​ ದಂಧೆಗೂ ಸಂಜನಾಗೂ ಲಿಂಕ್​ ಇರುವ ಹಾಗೂ ಡ್ರಗ್ಸ್ ಕೇಸ್​ನ ಇತರ ಆರೋಪಿಗಳ ಹೇಳಿಕೆ ಮೇರೆಗೆ ಗಲ್ರಾನಿಯನ್ನು ಸಿಸಿಬಿ ಬಂಧಿಸಿದೆ.ಬುಧವಾರ ಬೆಳಗ್ಗೆಯೇ ಸಂಜನಾರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
https://www.vijayavani.net/sanjana-galrani-marriage-photo-viral/
‘ಪ್ರಶಾಂತ್​ ಸಂಬರಗಿ ನನ್ನ ಜತೆಗೂ ಪಾರ್ಟಿಗಳಿಗೆ ಬಂದಿದ್ದ, ಜತೆಗೊಬ್ಬ ನಟಿಯನ್ನೂ ಕರೆತರುತ್ತಿದ್ದ’

ಪರಪ್ಪನ ಅಗ್ರಹಾರ ಜೈಲಿಗೆ ‘ಮಾದಕ’ ನಟಿ ರಾಗಿಣಿ ಶಿಫ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
