ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದವನ್ನೇ ಹುಟ್ಟುಹಾಕಿದ್ದ ಮುಡಾ ನಿವೇಶನದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಕೋಲಾಹಲವೇ ಸೃಷ್ಟಿಯಾಗಿದ್ದು, ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಿದ್ದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವಅರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಪ್ರಾಸಿಕ್ಯೂಷನ್​ಗೆ ಅನುಮತಿ ಸಿಕ್ಕಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳ ಕುರ್ಚಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸದ್ಯ ಇದೆಲ್ಲಾ ಬಿಜೆಪಿ ಪಿತೂರಿ ಎಂದು ಆರೋಪಿಸಿ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕೈ ಕಾರ್ಯಕರ್ತರು, ‘ಷಡ್ಯಂತ್ರಕ್ಕೆ ಸವಾಲ್’ ಎಂಬ ಹೆಸರಿನಲ್ಲಿ ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಪ್ರಾಸಿಕ್ಯೂಷನ್​ಗೆ ಅನುಮತಿ ಪ್ರಶ್ನಿಸಿ ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ ಸಿಎಂ ಸಿದ್ದು: ಇಂದು ಮಧ್ಯಾಹ್ನವೇ ವಿಚಾರಣೆ
ಇನ್ನು ಸಿಎಂ ರಾಜೀನಾಮೆ ಏಕೆ ಎಂದು ಪ್ರಶ್ನಿಸಿ ಮಾತನಾಡಿದ ಸಚಿವ ಸಂತೋಷ್ ಲಾಡ್​, “ಈ ಪ್ರತಿಭಟನೆ ಮಾಡವಂತದ್ದು ಯಾಕೆ ಅಂತ? ಈ ದೇಶದಲ್ಲಿ ಒಬ್ಬ ಹಿಂದುಳಿದ ಅಹಿಂದ ನಾಯಕನನ್ನು ತುಳಿಯುವ ಬಿಜೆಪಿಯವರ ಕುತಂತ್ರವೇನಿದೆಯೋ, ಇದು ರಾಜಕೀಯ ಪ್ರೇರಿತ. ನಾವು ಕೂಡ ಇದನ್ನು ರಾಜಕೀಯವಾಗಿಯೇ ಮಾಡಬೇಕಾಗುತ್ತದೆ” ಎಂದರು.
“ತಮ್ಮೆಲ್ಲರಿಗೂ ಗೊತ್ತಿರುವಂತೆ ಇದು ಯಾವ ಆಧಾರದ ಮೇಲೆ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ ಎಂಬುದು ಇದೀಗ ಜಗಜಾಹಿರಾಗಿದೆ. ಹೀಗಾಗಿ ನಾವು ರಾಜಕೀಯವಾಗಿ ಪ್ರತಿಭಟನೆ ಮಾಡಬೇಕು, ಮಾಡ್ತಿದ್ದೀವಿ ಅಷ್ಟೇ. ಒಬ್ಬ ಗವರ್ನರ್​ರನ್ನು ರಾಜಕೀಯವಾಗಿ ಹೇಗೆಲ್ಲಾ ಉಪಯೋಗಿಸಿಕೊಂಡು, ಸಿದ್ದರಾಮಯ್ಯರ ಹೆಸರನ್ನು ಹಾಳು ಮಾಡಲು ಮುಂದಾಗಿದ್ದಾರೆ ಎಂಬುದನ್ನು ಇಡೀ ಕರ್ನಾಟಕ ಜನತೆ ಗಮನಿಸಬೇಕು” ಎಂದು ಹೇಳಿದರು.
ಕಳೆದ 34 ದಿನದಿಂದ ಊಟ ಮಾಡಿಲ್ಲ! 1.2 ಕೋಟಿ ರೂ. ಸಾಲವಿದೆ, ಕೈಯಲ್ಲಿ ಕೆಲಸವಿಲ್ಲ: ಕಣ್ಣೀರಿಟ್ಟ ನಟ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 20 =
Remember me
