ಬೆಂಗಳೂರು:ವೇಶ್ಯಾವಾಟಿಕೆ ದಂಧೆ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಹಾಗೂ ಪತ್ನಿಗೆ ಗರ್ಭಪಾತ ಮಾಡಿಸಿದ ಆರೋಪದಲ್ಲಿ ಬಂಧನವಾಗಿರುವ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪತ್ನಿ ರಶ್ಮಿ ಶನಿವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದು, ಮತ್ತೊಂದೆಡೆ ರವಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ತಮ್ಮ ಪರಿಚಯಸ್ಥರ ಜತೆ ಆಗಮಿಸಿದ ರಶ್ಮಿಯನ್ನು ಡಿವೈಎಸ್ಪಿ ಅಂಜುಮಾಲಾ ನಾಯಕ್ ವಿಚಾರಣೆಗೊಳಪಡಿಸಿದರು. ಅಪರಾಹ್ನ 12.30ರ ಸುಮಾರಿಗೆ ಶೇಷಾದ್ರಿಪುರದಲ್ಲಿ ರವಿ ಜತೆ ವಾಸವಾಗಿದ್ದ ಫ್ಲ್ಯಾಟ್​​ನಲ್ಲಿ ಸ್ಥಳ ಮಹಜರು ಮಾಡಲಾಯಿತು. ಆ ನಂತರ ಗರ್ಭಪಾತ ಮಾಡಿಸಿದ ಆಸ್ಪತ್ರೆಗೆ ಕರೆದೊಯ್ದು ಮಾಹಿತಿ ಸಂಗ್ರಹಿಸಲಾಯಿತು. ಬಳಿಕ ಮತ್ತೆ ಸಿಐಡಿ ಕಚೇರಿಗೆ ಕರೆದೊಯ್ದು ಸಂಜೆ 6 ಗಂಟೆವರೆಗೂ ವಿಚಾರಣೆ ನಡೆಸಲಾಗಿದೆ.
ಈ ವೇಳೆ ಪತಿ ರವಿ ಅಲಿಯಾಸ್ ಮಂಜುನಾಥ್ ತಮ್ಮ ಮೇಲೆ ಎಸಗಿರುವ ದೌರ್ಜನ್ಯಗಳ ಕುರಿತು ಪತ್ನಿ ರಶ್ಮಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ವಾಸವಿದ್ದ ಸಂದರ್ಭದಲ್ಲಿ ಯಾವ ರೀತಿ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ಎಸಗಿದ್ದಾನೆ. ಯಾವ ಕಾರಣಕ್ಕೆ ಗರ್ಭಪಾತ ಮಾಡಿಸಿದ್ದಾನೆ. ಬೇರೆ ಯುವತಿಯರ ಸಂಪರ್ಕ ಇರುವುದು ನಿಜವೇ? ವೇಶ್ಯಾವಾಟಿಕೆ ಅಡ್ಡೆ ನಡೆಸಲು ಯಾವ ರಾಜ್ಯಗಳಿಂದ ಯುವತಿಯರನ್ನು ಕರೆಸುತ್ತಿದ್ದ ಎಂಬೆಲ್ಲ ಮಾಹಿತಿ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಪತಿ ರವಿ ವಿರುದ್ಧ ಮೈಸೂರಿನ ವಿಜಯನಗರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಗರ್ಭಪಾತ, ವೇಶ್ಯಾವಾಟಿಕೆ ಆರೋಪದ ಮೇಲೆ ರಶ್ಮಿ ದೂರು ನೀಡಿದ್ದರು.
ವೈದ್ಯಕೀಯ ತಪಾಸಣೆ:ಸಿಐಡಿ ವಶದಲ್ಲಿರುವ ರವಿ ಅಲಿಯಾಸ್ ಮಂಜುನಾಥ್‌ಗೆ ಶನಿವಾರ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಮಧುಮೇಹ ಹಾಗೂ ಇತರೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರವಿಗೆ ಆಗಾಗ್ಗೆ ವೈದ್ಯಕೀಯ ತಪಾಸಣೆ ಅಗತ್ಯವಿದೆ ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ.
ಮೇಲಿನ ಮನೆಯ ಶೋಯಬ್, ಕೆಳಗಿನ ಮನೆಯ ಶಾಜಿಯಾ ಒಂದೇ ದಿನ ಗಾಯಬ್!

ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!

ಮಕ್ಕಳಾಗಲಿ ಎಂದು ಮಹಿಳೆಗೆ ಮನೆಯವರೇ ಮನುಷ್ಯರ ಎಲುಬಿನ ಪುಡಿ ತಿನ್ನಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
