ಬೆಂಗಳೂರು:ಜ್ಯೂ.‌ಚಿರು ಆಗಮನಕ್ಕೆ ಕಾದಿರುವ ಸರ್ಜಾ ಫ್ಯಾಮಿಲಿ, ಚಿರು ಮಗುವಿನ ವೆಲ್​ಕಮ್​ಗೆ ಸ್ಪೆಷಲ್ ವಿಡಿಯೋ ಮಾಡಿದೆ.
ಅ.17ರಂದು ಸ್ಯಾಂಡಲ್​ವುಡ್ ನಟ ದಿ. ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಹೋದರ ಧ್ರುವ ಸರ್ಜಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಆ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ. ಹ್ಯಾಪಿ ಬರ್ತ್​ ಡೇ ಚಿರು.. ಮೈ ಲವ್​ ಫಾರೆವರ್​, ಜೂನಿಯರ್​ ಚಿರು ಕಮಿಂಗ್​ಸೂನ್​… ಎಂದು ಬರೆದುಕೊಂಡಿದ್ದಾರೆ. ಇದು ಚಿರು ಹುಟ್ಟು ಹಬ್ಬದ ದಿನವೇ ಜೂ. ಚಿರು ಜನನ ಆಗಲಿದೆಯಾ? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿಸಿದೆ.
ಇತ್ತೀಚೆಗಷ್ಟೆ ದಿವಗಂತ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರು ಚಿರು ಫೋಟೋ ಇಟ್ಟುಕೊಂಡೇ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದರು.
ಇದರ ಬೆನ್ನಲ್ಲೇ ನಟಿ ಮೇಘನಾ, “ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅ.16ರಂದು ಶಿವಾರ್ಜುನ ಸಿನಿಮಾ ಮತ್ತೆ ಬಿಡುಗಡೆಯಾಗುತ್ತಿದೆ” ಎಂದು ಪೋಸ್ಟ್ ಮಾಡುವ ಮೂಲಕ ಚಿರು ಅಭಿಮಾನಿಗಳಿಗೆ ಗುಡ್‍ನ್ಯೂಸ್ ನೀಡಿದ್ದರು. ಅ.17ರಂದು ಚಿರಂಜೀವಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಚಿರುವಿನ ಕೊನೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ.
ಚಿರು ಮತ್ತು ಮೇಘನಾ ಇಬ್ಬರೂ 2018ರಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ಎರಡೇ ವರ್ಷಕ್ಕೆ ಅಂದರೆ 2020ರ ಜೂನ್​ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದರು. ಅಂದಿನಿಂದ ದುಃಖದ ಮಡುವಿನಲ್ಲೇ ಇರುವ ಎರಡೂ ಕುಟುಂಬ ಚಿರು ಮಗುವಿನ ಆಗಮನಕ್ಕಾಗಿ ಕಾಯುತ್ತಿದೆ.
https://www.instagram.com/tv/CGZI2FfAPZX/?utm_source=ig_web_copy_link
PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 3 =
Remember me
