ಪ್ರಶ್ನೆ:ನನ್ನ ತಂದೆ ಸರ್ಕಾರಿ ನೌಕರರಾಗಿದ್ದು, ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿ ಶಾಶ್ವತ ಮಾನಸಿಕ ಅಸ್ವಸ್ಥರಾಗಿದ್ದಾರೆ. ಈಗ ಅವರ ಅವಲಂಬಿತರು ಅನುಕಂಪದ ನೌಕರಿ ಪಡೆಯಲು ಅರ್ಹರಾಗುವರೇ?
| ರಾಜೇಶ್​ ಕೋಲಾರ
ಉತ್ತರ:ಕರ್ನಾಟಕ ಸರ್ಕಾರಿ ಸೇವಾ (ಅನುಕಂಪದ ಮೇರೆಗೆ ನೇಮಕಾತಿ) ನಿಯಮಾವಳಿ&1996ರ ನಿಯಮ 3ಎ ಪ್ರಕಾರ ಶಾಶ್ವತ ಅಸಮರ್ಥತೆಯಿಂದಾಗಿ ವೈದ್ಯಕಿಯ ಕಾರಣಗಳ ಮೇರೆಗೆ ನಿವೃತ್ತಿ ಹೊಂದಿದ ಸರ್ಕಾರಿ ನೌಕರರ ಅವಲಂಬಿತರು ಅನುಕಂಪದ ನೇಮಕಾತಿ ಹೊಂದಲು ಅರ್ಹರಾಗುತ್ತಾರೆ. ಈ ನೇಮಕಾತಿಗೆ ಸರ್ಕಾರಿ ನೌಕರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಶಾಶ್ವತ ಅಸಮರ್ಥತೆ ಉಂಟಾಗಿರಬೇಕಾಗಿರುತ್ತದೆ. “ಕರ್ತವ್ಯದ ಮೇಲಿರುವಾಗ’ ಎಂಬ ಪದ ಮನೆಯಿಂದ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ನೌಕರ ಹೋಗಿ ಬರುವ ಪ್ರಯಾಣದ ಸಂದರ್ಭಕ್ಕೂ ಅನ್ವಯಿಸುತ್ತದೆ. ಹೆಚ್ಚಿನ ವಿವರಗಳಿಗೆ ಇದೇ ಲೇಖಕರ “ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ’ ಪುಸ್ತಕ ನೋಡಬಹುದು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + thirteen =
Remember me
