ಬೆಂಗಳೂರು:ಹಿಂದೂ ಪದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿ ವ್ಯಾಪಕ ಟೀಕೆ ಹಾಗೂ ತೀವ್ರ ಅಸಮಾಧಾನಕ್ಕೆ ಗುರಿಯಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಆ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂಬುದಾಗಿಯೂ ಅವರು ಹೇಳಿದ್ದಾರೆ.
ನಿಪ್ಪಾಣಿಯಲ್ಲಿ ನ. 6ರಂದು ಜರುಗಿದ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಎಂಬ ಪದ ಪರ್ಷಿಯನ್ ಪದವಾಗಿದ್ದು, ಭಾರತೀಯ ಪದವೇ ಅಲ್ಲ ಎಂಬಿತ್ಯಾದಿಯಾಗಿ ಹೇಳಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದರ ವಿರುದ್ಧ ಹಿಂದೂಪರ ಸಂಘಟನೆಗಳವರು, ಬಿಜೆಪಿಯ ನಾಯಕರು ಸೇರಿದಂತೆ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಆ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ. ಅದಾಗ್ಯೂ ಅವರು ತಮ್ಮ ಹೇಳಿಕೆಯನ್ನು ಬಹುತೇಕ ಸಮರ್ಥಿಸಿಕೊಂಡೇ ಸ್ಪಷ್ಟನೆಯನ್ನು ನೀಡಿದ್ದಾರೆ.

ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತಕ್ಕೀಡಾಗಿ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
