ಬಾಗಲಕೋಟೆ:ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸತೀಶ್ ಬಂಡಿವಡ್ಡರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್​ನ ಮೊದಲ ವಿಕೆಟ್ ಪತನವಾಗಿದೆ.
ಸದ್ಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಬಂಡಿವಡ್ಡರ ಕಾಂಗ್ರೆಸ್​ನಿಂದ ಮುಧೋಳ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಇದೀಗ ಟಿಕೆಟ್ ಕೈ ತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದರು. ಇದರ ಬೆನ್ನಲ್ಲೇ ರಾಜೀನಾಮೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಈ ಮೂವರು ಇನ್ಸ್​​ಪೆಕ್ಟರ್​​ಗಳನ್ನು ಕೂಡಲೇ ವರ್ಗಾವಣೆ ಮಾಡಿ; ಚುನಾವಣಾ ಅಧಿಕಾರಿಗೆ ದೂರು ನೀಡಿದ ಮಾಜಿ ಪ್ರಧಾನಿ
ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಬಂಡಿವಡ್ಡರ 60 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ ಈ ಬಾರಿಯೂ ಟಿಕೆಟ್ ಸಿಗುತ್ತದೆ ಎಂದು ಭಾವಿಸಿದ್ದರು. ಆದರೆ ಅಂತಿಮ ಹಂತದಲ್ಲಿ ಸತೀಶ್ ಅವರಿಗೆ ನಿರಾಸೆಯಾಗಿದೆ.
ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳು ಪಕ್ಷದಿಂದ ಹೊರಬರಲು ಒತ್ತಡ ಹಾಕಿದ್ದರು. ಹೀಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯನಮಠ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸತೀಶ್ ಬಂಡಿವಡ್ಡರ್ ಅವರ ಮುಂದಿನ ನಡೆ ಬಾಗಲಕೋಟೆಯಲ್ಲಿ ತೀವ್ರ ಕುತೂಗಲ ಕೆರಳಿಸಿದೆ.
ಇದನ್ನೂ ಓದಿ:ಸುರಕ್ಷಿತ ಕ್ಷೇತ್ರಕ್ಕಾಗಿ ಕಾಂಗ್ರೆಸ್​ ನಾಯಕರ ತಲಾಷೆ: BJP ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಗೇಲಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
