ನವದೆಹಲಿ:ಕರ್ನಾಟಕ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದ 20 ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ ರಸ್ತೆ ಹಾಗೂ ಭೂ ಸಾರಿಗೆ ಇಲಾಖೆ ಸಚಿವ ನಿತಿನ್​ ಗಡ್ಕರಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್​ ಗಡ್ಕರಿ ಭೇಟಿ ಬಳಿಕ ಮಾತನಾಡಿದ ಸತೀಶ್​ ಜಾರಕಿಹೊಳಿ ಕಳೆದ ಹತ್ತು ವರ್ಷಗಳಿಂದ ಬಾಕಿ ಉಳಿದಿದ್ದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದೆ. ರಾಯಚೂರು ರಿಂಗ್​ ರಸ್ತೆ, ಬೆಂಗಳೂರು ರಿಂಗ್​ ರೋಡ್​, ಶಿರಾಡಿ ಘಾಟ್ ಸುರಂಗ ಮಾರ್ಗ ಸೇರಿದಂತೆ ಹಲವು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ​
ಶಿರಾಡಿ ಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಇಲಾಖೆ ಒಪ್ಪಿಗೆ ಸೂಚಿಸಿಲ್ಲ. ಇದರ ಹೊರತ್ತಾಗಿಯೂ ಕೇಂದ್ರ ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳು ಬಾಕಿ ಉಳಿದಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ಬಗ್ಗೆಯೂ ಮಾತನಾಡಲಾಗಿದೆ.
ಇದನ್ನೂ ಓದಿ:ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪ್ರಾಣಬಿಟ್ಟ ವಿವಾಹಿತೆ
ರಾಯಚೂರು, ಗದಗ ಹಾಗೂ ಶಿವಮೊಗ್ಗದಲ್ಲಿ ರಿಂಗ್​ ರಸ್ತೆ, ಚಿಕ್ಕಬಳ್ಳಾಪುರ, ನವಲಗುಂದದಲ್ಲಿ ಬೈಪಾಸ್​ ರಸ್ತೆ ಬೆಳಗಾವಿ-ಗೋಕಾಕ್ ನಡುವಿನ​ ಎಲಿವೇಟೆಡ್​ ಕಾರಿಡಾರ್​ ನಿರ್ಮಾಣಕ್ಕೆ ಸಹ ಒಪ್ಪಿಗೆ ನೀಡುವಂತೆ ಕೇಳಲಾಗಿದೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಿಎಸ್​ಟಿಯನ್ನು ಭರಿಸುವ ವಿಚಾರದಲ್ಲಿ ಸಹಕಾರ ನೀಡಲಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ.
ಸಭೆಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ, ಜಿ.ಎಂ. ಸಿದ್ದೇಶ್ವರ, ಜಿ.ಎಸ್​. ಬಸವರಾಜು, ಉಮೇಶ್​​ ಜಾಧವ್​ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
