ಬೆಂಗಳೂರು:ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೋಮವಾರ ಸತೀಶ್ ರೆಡ್ಡಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಹೊಂಗಸಂದ್ರ ಶ್ರೀನಿವಾಸ್ ರೆಡ್ಡಿ, ನ್ಯಾಪನಹಳ್ಳಿ ಮಂಜುನಾಥ್, ಮಂಜುನಾಥ್ ರೆಡ್ಡಿ, ಸಯ್ಯದ್ ಸಲಾಂ ಮತ್ತಿತರರು ಹಾಜರಿದ್ದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮಾಡಿರುವ ಕೆಲಸಗಳು ಕೈ ಹಿಡಿಯಲಿದ್ದು ಸುಮಾರು 75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ. ನಾಲ್ಕನೇ ಬಾರಿಗೆ ಬೊಮ್ಮನಹಳ್ಳಿ ಕ್ಷೇತ್ರದ ಜನರು ನನಗೆ ಆಶೀರ್ವದಿಸಲಿದ್ದಾರೆ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ನಾನು ಕಣ್ಣೀರು ಹಾಕುವವನಲ್ಲ, ಕಣ್ಣೀರು ಒರೆಸುವವನು…
ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಡಬಲ್‌ ಫೋರ್ಸ್‌ನಲ್ಲಿ ಅಭಿವೃದ್ದಿ ಕಾರ್ಯ ಮಾಡಿವೆ. ಸತತ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗುವ ಮೂಲಕ ನನ್ನ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕೆಲಸ ಮಾಡಿದ್ದೇನೆ. ಇವುಗಳ ಆಧಾರದ ಮೇಲೆ ಮತದಾರರು ಹೆಚ್ಚಿನ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಬೃಹತ್‌ ಮೆರವಣಿಗೆಯಲ್ಲಿ ಆಗಮಿಸಿದ ಸತೀಶ್ ರೆಡ್ಡಿ, ಹೊಂಗಸಂದ್ರದ ಶ್ರೀ ವೀರಾಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಿಬಿಎಂಪಿ ಮಾಜಿ ಉಪಮೇಯರ್‌ ರಾಮ್‌ ಮೋಹನ್‌ ರಾಜ್‌ ಹಾಗೂ ಇನ್ನಿತರ ಪ್ರಮುಖ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:ಈಡುಗಾಯಿ ಹರಕೆ ತೀರಿಸಿದ ಡಿಕೆಶಿ; ದೇವಸ್ಥಾನದ ಹುಂಡಿಗೆ ಬಿತ್ತು 500 ರೂ. ನೋಟಿನ ಕಂತೆ ಕಂತೆ ಹಣ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − eight =
Remember me
