ಉಡುಪಿ:ಇಲ್ಲಿನ ಬ್ರಹ್ಮಗಿರಿ ಸರ್ಕಲ್​​ನಲ್ಲಿ ಸಾವರ್ಕರ್ ಪುತ್ಥಳಿ ನಿರ್ಮಾಣ ವಿಚಾರವಾಗಿ ಇದೀಗ ನಗರಸಭೆ ಮೇಲೆ ಒತ್ತಡ ಹೆಚ್ಚಾಗಿದ್ದು, ಈ ಮಧ್ಯೆ ಶಾಸಕ ರಘುಪತಿ ಭಟ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಹಿಂದೂ ಮುಖಂಡ ಯಶ್​ಪಾಲ್​ ಸುವರ್ಣ ಅವರು ಸಾವರ್ಕರ್​ ಪುತ್ಥಳಿ ಸ್ಥಾಪಿಸುವುದಾಗಿ ಹೇಳಿದ್ದು, ಉಡುಪಿ ನಗರಸಭೆಗೆ ಮನವಿ ಮಾಡಿದ್ದರು. ಬ್ಯಾನರ್ ಅಳವಡಿಸಿದ ಸ್ಥಳದಲ್ಲಿ ಪುತ್ಥಳಿ ನಿರ್ಮಿಸುವುದಾಗಿ ಘೋಷಿಸಿದ್ದರು. ಹಿಂದೂ ಮಹಾಸಭಾ, ಹಿಂದೂ ಜಾಗರಣ ವೇದಿಕೆ ಕೂಡ ನಗರಸಭೆಗೆ ಮನವಿ ಮಾಡಿತ್ತು. ಪರಿಣಾಮವಾಗಿ ನಗರಸಭೆ ಮೇಲೆ ಒತ್ತಡ ಹೆಚ್ಚಾಗಿದೆ.
ಬಿಜೆಪಿ ಆಡಳಿತವಿರುವ ಉಡುಪಿ ನಗರಸಭೆ ಮುಂದಿನ ಕೌನ್ಸಿಲ್ ಮೀಟಿಂಗ್​ನಲ್ಲಿ ಪುತ್ಥಳಿ ನಿರ್ಮಾಣದ ಬಗ್ಗೆ ಚರ್ಚಿಸಿ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಈ ಮಧ್ಯೆ ಪುತ್ಥಳಿ ಸ್ಥಾಪಿಸುವ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರತಿಮೆ ಸ್ಥಾಪನೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟ. ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ. ಜನನಿಬಿಡ ಪ್ರದೇಶವಾದ ಹಳೇ ತಾಲೂಕು ಕಚೇರಿ ಬಳಿಯ ಸರ್ಕಲ್​ಗೆ ಸಾವರ್ಕರ್ ಹೆಸರು ಇಡುವ ಬಗ್ಗೆ ನಗರಸಭೆಯ ಅಧಿವೇಶನದಲ್ಲಿ ಠರಾವು ಇಡುತ್ತೇನೆ. ಈ ಬಗ್ಗೆ ಈಗಾಗಲೇ ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಶಾಸಕರು ಹೇಳಿದ್ದಾರೆ. ಮೂರ್ತಿ ನಿರ್ಮಿಸುವ ಬಗ್ಗೆ ಚರ್ಚೆ ಮಾಡಬೇಕು. ಆದರೆ ವೀರ ಸಾವರ್ಕರ್ ಜೊತೆಗೆ ಅಂಬೇಡ್ಕರ್ ಸರ್ಕಲ್ ಕೂಡ ಮಾಡುತ್ತೇವೆ ಎಂದು ಅವರು ಹೇಳಿದರು.
‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + six =
Remember me
