ಬೆಂಗಳೂರು:ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಎಂಎಲ್ಸಿ ಡಿ.ಎಸ್.ವೀರಯ್ಯ ಅವರನ್ನು ಆಯ್ಕೆ ಮಾಡಬೇಕು ಎಂದು ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಒಕ್ಕೂಟ ಒತ್ತಾಯಿಸಿದೆ.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ.ಎಂ.ನಾಗರಾಜ್ ಮಾತನಾಡಿ, ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಮುಖಂಡರಾಗಿರುವ ಇವರು ಬಿಜೆಪಿಗೆ 25 ವರ್ಷಗಳಿಂದ ದುಡಿದಿದ್ದಾರೆ. ದಲಿತ ಸಮುದಾಯದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ನೂರಾರು ಸಂಘಟನೆಗಳನ್ನು ಕಟ್ಟಿ ಬೆಳೆಸಿ 4 ದಶಕಗಳಿಂದ ಸಮುದಾಯದ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಇವರಿಗೆ ಬಿಜೆಪಿಯಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಆದ್ದರಿಂದ, ಬಿಜೆಪಿ ವರಿಷ್ಠರು, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಇವರನ್ನು ರಾಜ್ಯಸಭೆಗೆ ಕಳುಹಿಸಿಕೊಡುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಪಕ್ಷದಿಂದ ಹೊರಬನ್ನಿ?ಎರಡು ಬಾರಿ ಎಂಎಲ್ಸಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಸಂಚಾಲಕರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. 2 ಬಾರಿ ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪಮತಗಳಿಂದ ಸೋತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ವೀರಯ್ಯ ಅಭ್ಯರ್ಥಿಯಾಗಿ ಬಿಂಬಿತರಾಗಿದ್ದರೂ ರಾಜಕೀಯ ಪ್ರಭಾವದಿಂದ ಕೊನೆ ಗಳಿಕೆಯಲ್ಲಿ ಟಿಕೆಟ್ ತಪ್ಪಿಸಲಾಯಿತು. ಪ್ರತಿ ಹಂತದಲ್ಲೂ ಇವರಿಗೆ ಅನ್ಯಾಯವಾಗಿದೆ. ಆದ್ದರಿಂದ, ಇವರನ್ನು ರಾಜ್ಯಸಭೆಗೆ ಕಳುಹಿಸಬೇಕು ಹಾಗೂ ನಿಗಮಗಳಲ್ಲಿ ಪ್ರಮುಖ ಹುದ್ದೆ ಕೊಡಬೇಕು. ಇಲ್ಲದಿದ್ದರೆ, ಪಕ್ಷದಿಂದ ಹೊರ ಬರುವಂತೆ ಅವರಿಗೆ ಹೇಳಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಕರ್ನಾಟಕ ಸಮತಾ ಸೈನಿಕದಳ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ತಿಳಿಸಿದ್ದರೆ.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸಿದ್ದಲಿಂಗಯ್ಯ ಮಾತನಾಡಿ, ಮಠಾಧೀಶರು, ನೂರಾರು ದಲಿತ ಸಂಘಟನೆಗಳು, ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಸಿಎಂ ಅವರನ್ನು ಭೇಟಿ ಮಾಡಿ ವೀರಯ್ಯ ಅವರಿಗೆ ರಾಜಕೀಯದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಆದ್ದರಿಂದ, ಮುಂದಿನ ದಿನಗಳಲ್ಲಿ ನಡೆಯುವ ಚುನಾವಣೆಯಲ್ಲಿ ವಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದರು.
50 ವರ್ಷ ಇವರೇ ಪ್ರಧಾನಿ! ಸುದೀರ್ಘ ಆಳ್ವಿಕೆಯ ದಾಖಲೆ ನಿರ್ಮಿಸಿದ್ದ ಖಲೀಫಾ ನಿಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 19 =
Remember me
