ಬೆಂಗಳೂರು:ಹಿರಿಯ ವಿದ್ವಾಂಸ,ಪ್ರವಚನಕಾರ,ಸಾಹಿತಿ ಮತ್ತು ಪ್ರಕಾಶಕ ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರು ಬೆಂಗಳೂರಿನಲ್ಲಿ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 71ವರ್ಷ ವಯಸ್ಸಾಗಿದ್ದ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಉಡುಪಿ ಮೂಲದ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು ಹಾಗೂ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತಿತರ ಪಂಡಿತರಲ್ಲಿ ಅಧ್ಯಯನ ಮಾಡಿ,ವೇದಾಂತ ಶಾಸ್ತ್ರದಲ್ಲಿ ಪಾರಂಗತರಾಗಿದ್ದರು.ಸಂಸ್ಕೃತದಲ್ಲಿ ಎಂಎ ಪಡೆದು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿದ್ದ ರಾಘವೇಂದ್ರ ಉಪಾಧ್ಯಾಯ ಅವರು ಪರವಿದ್ಯಾ ಪ್ರಕಾಶನ ಸಂಸ್ಥೆ ಆರಂಭಿಸಿ ನೂರಾರು ಗ್ರಂಥಗಳನ್ನು ಪ್ರಕಟಿಸಿದ್ದರು.
ವಿದ್ವಾಂಸ ಸಗ್ರಿ ಅವರ ನಿಧನಕ್ಕೆ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ,ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ,ಫಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದು,ಮೃತರಿಗೆ ಸದ್ಗತಿ ದೊರಕಲಿ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
