|ಮಂಜುನಾಥ ಕೋಳಿಗುಡ್ಡಬೆಳಗಾವಿ
ಉನ್ನತ ಶಿಕ್ಷಣದವರೆಗೆ ರೈತರ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಲು ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ರಾಜ್ಯಾದ್ಯಂತ 4.53 ಲಕ್ಷ ವಿದ್ಯಾರ್ಥಿಗಳು ಶಿಷ್ಯ ವೇತನ ಪಡೆದಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆ ಮೊದಲ ಸ್ಥಾನ ಪಡೆದು ದಾಖಲೆ ನಿರ್ವಿುಸಿದೆ.
4 ತಿಂಗಳಲ್ಲಿ ಜಿಲ್ಲೆಯ 51 ಸಾವಿರ ವಿದ್ಯಾರ್ಥಿಗಳು 12.41 ಕೋಟಿ ರೂ. ಶಿಷ್ಯವೇತನ ಪಡೆದಿದ್ದಾರೆ. ರಾಜ್ಯದ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಲ್ಲಿ 8ನೇ ತರಗತಿಯಿಂದ ಪಿಯುಸಿ, ಐಟಿಐ, ಡಿಪ್ಲೊಮಾ, ವಿವಿಧ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಗಳಲ್ಲಿ 28 ಲಕ್ಷಕ್ಕೂ ಅಧಿಕ ರೈತ ಮಕ್ಕಳು ಓದುತ್ತಿದ್ದಾರೆ. ಇವರಲ್ಲಿ 4.53 ಲಕ್ಷ ವಿದ್ಯಾರ್ಥಿಗಳು 111.35 ಕೋಟಿ ರೂ. ಶಿಷ್ಯವೇತನ ಪಡೆದಿದ್ದಾರೆ. 2021ರ ಡಿಸೆಂಬರ್​ನಿಂದ ಜ.18ರ ವರೆಗೆ ಶಿಷ್ಯವೇತನಕ್ಕಾಗಿ 5 ಲಕ್ಷಕ್ಕೂ ಅಧಿಕ ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಪ್ರೌಢಶಾಲೆ, ಪಿಯುಸಿ ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ. ಮಾಹಿತಿ ಕೊರತೆ ಇನ್ನಿತರ ಕಾರಣಗಳಿಂದ ಇತರ ಪದವಿ ವಿದ್ಯಾರ್ಥಿಗಳು ನಿರೀಕ್ಷಿತ ಪ್ರಮಾಣದಲ್ಲಿ ರೈತ ವಿದ್ಯಾನಿಧಿಗೆ ಅರ್ಜಿ ಸಲ್ಲಿಸಿಲ್ಲ.
ಹೆಸರಿಲ್ಲದೆ ಪರದಾಟ:ಪಹಣಿಯಲ್ಲಿ ಹೆಸರು ಇಲ್ಲದಿರುವ ರೈತರು ಮಕ್ಕಳ ಹೆಸರು ನಮೂದಿಸಿಕೊಳ್ಳಲು ಕಂದಾಯ ಇಲಾಖೆ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಕೆಲ ರೈತರ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಜೋಡಣೆ ಆಗದಿರುವುದು ಮತ್ತು ಅವರ ಮಕ್ಕಳ ಹೆಸರಿನಲ್ಲಿ ಪ್ರತ್ಯೇಕ ಬ್ಯಾಂಕ್ ಖಾತೆಯೂ ಇಲ್ಲದಿರುವುದು ಇದಕ್ಕೆ ಕಾರಣ.
ರೈತ ವಿದ್ಯಾನಿಧಿ ಶಿಷ್ಯವೇತನ ಸೌಲಭ್ಯಕ್ಕಾಗಿ ಹಳ್ಳಿಗಳಲ್ಲಿ ನಿರಂತರ ಪ್ರಚಾರ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡುತ್ತಿರುವುದರಿಂದ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ. ರಾಜ್ಯದಲ್ಲಿ ಅತಿ ಹೆಚ್ಚು ಶಿಷ್ಯವೇತನ ನೀಡಿರುವ ಜಿಲ್ಲೆಗಳಲ್ಲಿ ಬೆಳಗಾವಿ ಪ್ರಥಮ ಸ್ಥಾನದಲ್ಲಿದೆ.
|ಶಿವನಗೌಡ ಪಾಟೀಲಕೃಷಿ ಇಲಾಖೆ ಜಂಟಿ ನಿರ್ದೇಶಕ, ಬೆಳಗಾವಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
