ಬೆಂಗಳೂರು:ಶಾಲಾ ಮಕ್ಕಳ ಬ್ಯಾಗ್​ನ ಭಾರ ತಗ್ಗಿಸುವ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಶಿಕ್ಷಣ ಇಲಾಖೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸರ್ಕಾರವು 2019ರಲ್ಲಿಯೇ ಬ್ಯಾಗ್ ತೂಕವನ್ನು ವೈಜ್ಞಾನಿಕವಾಗಿ ನಿಗದಿ ಮಾಡಿದೆ. ಆದರೂ ಬಹುತೇಕ ಶಾಲೆಗಳು ವೇಳಾಪಟ್ಟಿಯನ್ನು ನಿಗದಿ ಮಾಡದ ಪರಿಣಾಮ ಮಕ್ಕಳು ಬೆನ್ನುಮೂಳೆ ಮುರಿಯುವಂತೆ ಪುಸ್ತಕಗಳನ್ನು ಹೊರುವಂತಾಗಿದೆ. ಶೈಕ್ಷಣಿಕ ವರ್ಷಾರಂಭ ಹಿನ್ನೆಲೆ ಕಡ್ಡಾಯವಾಗಿ ‘ಶಾಲಾ ಬ್ಯಾಗ್ ಹೊರೆ ತಗ್ಗಿಸುವಂತೆ’ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್​ಇಆರ್​ಟಿ) ಅಧ್ಯಯನ ನಡೆಸಿ 1-10ನೇ ಕ್ಲಾಸ್ ಮಕ್ಕಳ ಬ್ಯಾಗ್ ತೂಕ ಎಷ್ಟು ಇರಬೇಕು ಎಂಬುದನ್ನು ಸೂಚಿಸಿದೆ. ವಿದ್ಯಾರ್ಥಿಗಳ ದೇಹದ ತೂಕದ ಶೇ.10ರಿಂದ 15 ರಷ್ಟು ಮಾತ್ರ ಶಾಲಾ ಬ್ಯಾಗ್ ತೂಕವಿರಬೇಕು ಎಂದು ಶಿಫಾರಸು ಮಾಡಿದೆ. ಇದನ್ನು ಮೂಳೆತಜ್ಞರು ಕೂಡ ಅಂಗೀಕರಿಸಿದ್ದಾರೆ.
2016ರಲ್ಲಿ ಸಮಿತಿ ರಚನೆ:ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್​ಇಆರ್​ಟಿ) ಮತ್ತು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಸಹಯೋಗದಲ್ಲಿ 2016ರಲ್ಲಿ ಶಾಲಾ ಬ್ಯಾಗ್ ತೂಕ ಕಡಿತಗೊಳಿಸುವ ಕುರಿತು ಸಮಿತಿ ರಚಿಸಲಾಗಿತ್ತು. ಸಮಿತಿಯು ಶಿಕ್ಷಣ ಇಲಾಖೆ ಆಯುಕ್ತರು, ಶಿಕ್ಷಣ ತಜ್ಞರು, ಮಕ್ಕಳ ವೈದ್ಯರು ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರನ್ನು ಒಳಗೊಂಡಿತ್ತು. ಈ ಸಮಿತಿಯು ಮಕ್ಕಳ ತೂಕದ ಆಧಾರದಲ್ಲಿ ವೈಜ್ಞಾನಿಕವಾಗಿ ಸಂಶೋಧನೆ ನಡೆಸಿ 2018ರಲ್ಲಿ ಶಿಕ್ಷಣ ಇಲಾಖೆಗೆ ವರದಿ ನೀಡಿತ್ತು. ಇಲಾಖೆಯು 2019-20ರ ಶೈಕ್ಷಣಿಕ ವರ್ಷದಿಂದ ಶಾಲಾ ಬ್ಯಾಗ್ ತೂಕ ಕಡಿಮೆ ಮಾಡುವ ಆದೇಶ ಹೊರಡಿಸಿತ್ತು. ಕರೊನಾ ಕಾರಣದಿಂದ ಸಮರ್ಪಕವಾಗಿ ವರದಿ ಅನುಷ್ಠಾನವಾಗಿರಲಿಲ್ಲ.
ಬೆಂಗಳೂರು:ಕೇಂದ್ರ ಸರ್ಕಾರದ 2020ರ ಶಾಲಾ ಬ್ಯಾಗ್ ನೀತಿಯನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ತರಲಾಗಿಲ್ಲ ಎಂದು ಆಕ್ಷೇಪಿಸಿ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಾಹಿತಿ ಕೊರತೆ ಇರುವುದಾಗಿ ಹೈಕೋರ್ಟ್ ಹೇಳಿದೆ. ಅರ್ಜಿ ಗಂಭೀರ ವಿಷಯವನ್ನು ಒಳಗೊಂಡಿದೆ. ಹೀಗಾಗಿ ಸೂಕ್ತ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಹೊಸದಾಗಿ ಸಲ್ಲಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ಪೀಠ ಬುಧವಾರ ವಿಚಾರಣೆ ವೇಳೆ ತಿಳಿಸಿತು.
ಮಕ್ಕಳ ದೈಹಿಕ-ಮಾನಸಿಕ ಆರೋಗ್ಯ ಬೆಳವಣಿಗೆಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಬ್ಯಾಗ್​ಗಳ ತೂಕಕ್ಕೆ ಮಿತಿ ನಿಗದಿಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ಅದನ್ನು ಸಮರ್ಪಕವಾಗಿ ಜಾರಿಗೆ ತರಲಾಗಿಲ್ಲ. ಆದ್ದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿತ್ತು. ಆದರೆ, ನೀತಿ ಜಾರಿಗೆ ಸಂಬಂಧಿಸಿದ ಮಾಹಿತಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಕೋರಲಾಗಿಲ್ಲ. ಅರ್ಜಿದಾರರು ಶಾಲೆಗಳಿಗೆ ಭೇಟಿ ನೀಡಿದ ವಿವರ ಒದಗಿಸಿಲ್ಲ. ಈ ಕಾರಣದಿಂದ ಅರ್ಜಿ ವಜಾಗೆ ನ್ಯಾಯಪೀಠ ಮುಂದಾಯಿತು. ಸೂಕ್ತ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಸಲ್ಲಿಸುವುದಾಗಿ ವಕೀಲ ರಮೇಶ್ ನಾಯಕ್ ಅರ್ಜಿ ಹಿಂಪಡೆದರು.
ಜಾರಿಯಾಗದ ನೋ ಬ್ಯಾಗ್ ಡೇ:ಶಾಲೆಗಳಲ್ಲಿ ಪ್ರತಿ ಶನಿವಾರ ಮಕ್ಕಳಿಗೆ ‘ನೋ ಬ್ಯಾಗ್ ಡೇ’ ಯೋಜನೆಯನ್ನು 2017ರಲ್ಲಿ ರೂಪಿಸಲಾಗಿತ್ತು. 2019ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿ ಪ್ರತಿ ಶನಿವಾರ ಮಕ್ಕಳು ಬ್ಯಾಗ್ ತರದೆ ‘ಸಂಭ್ರಮ ಶನಿವಾರ’ ಆಚರಿಸಲು ಸೂಚಿಸಿತ್ತು. ವಿದ್ಯಾರ್ಥಿಗಳನ್ನು ವಾರದ ಒಂದು ದಿನ ಸಂಪೂರ್ಣವಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡುವುದು ಇಲಾಖೆ ಉದ್ದೇಶವಾಗಿತ್ತು.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
