ಚಾಮರಾಜನಗರ:ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ಅಪಘಾತ ನಡೆದಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಮಕ್ಕಳನ್ನು ಶಾಲೆಯಿಂದ ಮರಳಿ ಊರಿಗೆ ಬಿಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಈ ವಾಹನದಲ್ಲಿ 20ಕ್ಕೂ ಅಧಿಕ ಮಕ್ಕಳಿದ್ದು, ಚಾಲಕನ‌ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದೃಷ್ಟವಶಾತ್ ಮಕ್ಕಳಿಗೆ ಪ್ರಾಣಾಪಾಯ ಉಂಟಾಗಿಲ್ಲ. ಈ ಮಧ್ಯೆ ಪೋಷಕರಿಗೆ ವಿಚಾರ ತಿಳಿಸದೆ ಶಾಲಾ ಆಡಳಿತ ಮಂಡಳಿ ಗೂಡ್ಸ್ ವಾಹನದಲ್ಲಿ ಮಕ್ಕಳನ್ನು ಗ್ರಾಮಗಳಿಗೆ ಕಳುಹಿಸಿದೆ ಎನ್ನಲಾಗಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..
ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..
ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 8 =
Remember me
