ಉತ್ತರಕನ್ನಡ:ರಾಜ್ಯದಲ್ಲಿ ಬಹಳಷ್ಟು ಶಾಲೆಗಳು ಶಿಥಿಲಾವಸ್ಥೆಯಲ್ಲಿರುವುದು ಇಲ್ಲವೇ ಕಳಪೆ ಕಾಮಗಾರಿಯ ಕಟ್ಟಡವನ್ನು ಹೊಂದಿರುವುದು ಹಳೆಯ ವಿಷಯವೇ. ಆ ಬಗ್ಗೆ ಬಹಳಷ್ಟು ಸುದ್ದಿಯಾಗಿದ್ದರೂ ಇನ್ನೂ ಕೆಲವೆಡೆ ಅಂಥದ್ದೇ ಪರಿಸ್ಥಿತಿ ಮುಂದುವರಿದಿದೆ. ಪರಿಣಾಮವಾಗಿ, ಇಂದು ಶಾಲೆಯೊಂದರ ಮೇಲ್ಛಾವಣಿ ಪದರ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಿರ್ಮಲ ಹೃದಯ ಪ್ರಾಥಮಿಕ ಶಾಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ. ಈ ಶಾಲೆಯ ಮಕ್ಕಳು ಮಧ್ಯಾಹ್ನ ಊಟ ಮಾಡುತ್ತಿರುವಾಗಲೇ ಶಾಲೆಯ ಮೇಲ್ಛಾವಣಿ ಪದರಗಳು ಕಿತ್ತುಕೊಂಡು ಉದುರಿವೆ. ಈ ಸಂದರ್ಭದಲ್ಲಿ ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಅಂಕೋಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರಗಳ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
15 ಸಾವಿರ ಶಿಕ್ಷಕರ ನೇಮಕಾತಿಗೆ ಮೇನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
