ಬೆಂಗಳೂರುಶಾಲಾ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವ ಜತೆಗೆ ಭಾಷಾ ಕೌಶಲವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ‘100 ದಿನಗಳ ಓದುವ ಆಂದೋಲನ’ ನಡೆಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ತಿಳಿಸಿದೆ.
ರಾಜ್ಯಾದ್ಯಂತ ವ್ಯಾಸಂಗ ಮಾಡುತ್ತಿರುವ ಬಾಲವಾಟಿಕ, ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯಕ್ರಮ ನಡೆಸುವಂತೆ ತಿಳಿಸಲಾಗಿದೆ ಸಮಗ್ರ ಶಿಕ್ಷಣ ನಿರ್ದೇಶರು ತಿಳಿಸಿದ್ದಾರೆ.
ಮಕ್ಕಳಲ್ಲಿ ಒದುವ, ಬರೆಯುವ, ಅರ್ಥೈಸಿಕೊಳ್ಳುವ ಹಾಗೂ ಸಂತೋಷದಿಂದ ಭಾಷಾ ಚಟುವಟಕೆಗಳಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಬೇಕಾಗಿದೆ. ಈ ಉದ್ದೇಶದಿಂದ ‘ಓದುವ ಆಂದೋಲನ’ವನ್ನು ಅನುಷ್ಠಾನ ಮಾಡಲಾಗುತ್ತಿದೆ.
ಬಾಲವಾಟಿಕದಿಂದ 2ನೇ ತರಗತಿ, 3ರಿಂದ 5ನೇ ತರಗತಿ ಮತ್ತು 6ರಿಂದ 8ನೇ ತರಗತಿ ವಿದ್ಯಾರ್ಥಿಗಳನ್ನು 3 ಗುಂಪುಗಳನ್ನಾಗಿ ಮಾಡಿ ನ.15ರಿಂದ 2024ರ ೆ.22ರ ವರೆಗೆ ಕಾರ್ಯಕ್ರಮ ನಡೆಸುವಂತೆ ತಿಳಿಸಲಾಗಿದೆ.
ಕಾರ್ಯಕ್ರಮದ ಯಶಸ್ಸಿಗಾಗಿ ರಾಜ್ಯಮಟ್ಟದ ನೋಡಲ್ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಷ್ಠಾನ ಮಾಡುವಂತೆ ತಿಳಿಸಬೇಕು. ಪ್ರಾಂಶುಪಾಲರು, ಅಧಿಕಾರಿ ವರ್ಗ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಠಾನ ಅವಲೋಕಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nine =
Remember me
