ಬೆಂಗಳೂರು:ಅಗತ್ಯ ಸೇವೆಗಳ ಸರ್ಕಾರಿ ಕಚೇರಿಗಳನ್ನು ಶೇ. 50 ಸಿಬ್ಬಂದಿ ಯೊಂದಿಗೆ ನಡೆಸುವುದು, ಗಡಿಯಲ್ಲಿ ಸರಕು ಸಾಗಣೆಗೆ ಅವಕಾಶ, ಎಸಿ ಬಸ್, ಮೆಟ್ರೋ ರೈಲು ಹಾಗೂ ಎಸಿ ಅಂಗಡಿಗಳನ್ನು ತೆರೆಯದೇ ಲಾಕ್​ಡೌನ್ ಹಂತ ಹಂತವಾಗಿ ಹೇಗೆ ಸಡಿಲ ಮಾಡಬಹುದು ಎಂಬ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಜ್ಞರ ಸಮಿತಿ ಸರ್ಕಾರಕ್ಕೆ ಕೆಲವು ಶಿಫಾರಸು ಮಾಡಿದೆ.
ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅಧ್ಯಕ್ಷತೆಯ ತಜ್ಞರ ಸಮಿತಿಯು ಲಾಕ್​ಡೌನ್ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬುಧವಾರ ವರದಿ ಸಲ್ಲಿಸಿತು. ಈ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್, ರಾಜೀವ್ ಗಾಂಧಿ ಆಸ್ಪತ್ರೆಯ ಡಾ. ನಾಗರಾಜ್, ಡಾ. ರವಿ ಹಾಗೂ ಡಾ. ಸುದರ್ಶನ್ ಅವರಿದ್ದಾರೆ. ಹಂತ ಹಂತವಾಗಿ ಲಾಕ್​ಡೌನ್ ಸಡಿಲಗೊಳಿಸುವುದು ಹೇಗೆ ಎಂಬ ಬಗ್ಗೆ ಈ ಸಮಿತಿ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಿದೆ. ಇದಕ್ಕಾಗಿ ಸಮಿತಿಯವರಿಗೆ ಸಿಎಂ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ 6 ತಿಂಗಳವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ.
ಹಾಟ್​ಸ್ಪಾಟ್​ಗಳಲ್ಲಿ ಲಾಕ್​ಡೌನ್ ಮುಂದುವರಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ಸಮಿತಿಯ ಶಿಫಾರಸುಗಳನ್ನು ಪರಿಶೀಲಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದರು.
ಶಿಫಾರಸಿನ ಕೆಲವು ಮುಖ್ಯಾಂಶಗಳು
ನನಗೆ ಗೌರವ ಸೂಚಿಸುವ ಬದಲು ಬಡ ಕುಟುಂಬಗಳ ಜವಾಬ್ದಾರಿ ವಹಿಸಿಕೊಳ್ಳಿ: ಪ್ರಧಾನಿ ಮೋದಿ ಸಲಹೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + one =
Remember me
