ದೊಡ್ಡಬಳ್ಳಾಪುರ:ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಚೇತನ (12) ಮೃತಪಟ್ಟ ಬಾಲಕಿ. Ike ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿ ಮಗಳು. ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್​​ ಸ್ಪರ್ಶಿಸಿ ಮೃತಪಟ್ಟಿದ್ದಾಳೆ.
ಭಾನುಬಾರ ಬೆಳಿಗ್ಗೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾನೆ ಮಾಡಿದ್ದ ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಳಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸ್ ಇನ್​ಸ್ಪೆಕ್ಟರ್​ ಸಾಧಿಕ್ ಪಾಷ ತಿಳಿಸಿದ್ದಾರೆ. ತಕ್ಷಣ ಬಾಲಕಿ ಚೇತನಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ಸ್ಪರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿಜಾವ ಐದು ಗಂಟೆಗೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.
ಬಾಲಕಿ ಚೇತನ ಕೊನಘಟ್ಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ  ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ವೃದ್ಧನ ಪಿತ್ತಕೋಶದಲ್ಲಿ 6,110 ಕಲ್ಲುಗಳು! ಇದು ಅಪರೂಪದ ಶಸ್ತ್ರಚಿಕಿತ್ಸೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 8 =
Remember me
