ಬೆಂಗಳೂರು:ಕರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬಾರದು ಎಂಬುದಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ದನಿಗೂಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಶೋಭಾ, ಮೊದಲು ಜೀವ ಉಳಿಸೋಣ, ನಂತರ ಜೀವನ ನಡೆಸೋಣ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವುದನ್ನು ನಾವೆಲ್ಲರೂ ಪಾಲಿಸೋಣ. ಸದ್ಯಕ್ಕೆ ಶಾಲೆ ಆರಂಭಿಸುವುದು ಬೇಡ. ಅಷ್ಟೇ ಅಲ್ಲ, ಈ ಶೈಕ್ಷಣಿಕ ವರ್ಷವನ್ನು ‘ಶಾಲಾಪರೀಕ್ಷಾ ರಹಿತ ವರ್ಷ’ ಅಂತ ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರೊನಾ ಸೋಂಕಿನಿಂದ ಶಿಕ್ಷಕರೂ ಸಾಯುತ್ತಿದ್ದಾರೆ. ಈ ಹಂತದಲ್ಲಿ ಶಾಲೆ ಪ್ರಾರಂಭಿಸುವುದರಿಂದ ಅವರಿಗೂ, ಮಕ್ಕಳಿಗೂ ಇಬ್ಬರಿಗೂ ತೊಂದರೆಯಾಗುತ್ತದೆ. ಶಿಕ್ಷಕರು ಮತ್ತು ಮಕ್ಕಳ ಜೀವ ಉಳಿಸಲು ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮಕ್ಕಳನ್ನು ಯಮನ ಬಾಯಿಗೆ ತಳ್ಳಬೇಡಿ: ಸಿದ್ದರಾಮಯ್ಯ

ಹಾವು ಕಡಿತಕ್ಕೊಳಗಾದ ಬಾಲಕ ಹೆಬ್ಬಾವಿನ ತಲೆ ಮೇಲೆ ಕಾಲಿಟ್ಟು ನಿಂತ! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − two =
Remember me
