ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆ ಆರಂಭದ ಬಗ್ಗೆ ವರದಿ ಸಲ್ಲಿಕೆ ಮಾಡಿದ್ದರೂ ಸಹ ಶಾಲಾ ತರಗತಿ ಆರಂಭಿಸುವ ಕುರಿತು ಪಾಲಕರಿಂದ ಅಭಿಪ್ರಾಯ ಸಂಗ್ರಹಿಸಿಲ್ಲವೆಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಮತ್ತೆ ಸಭೆ ನಡೆಸಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಶಾಲೆ ಆರಂಭದ ವರದಿ ಶಿಕ್ಷಣ ಸಚಿವರಿಗೆ ಮತ್ತು ಮುಖ್ಯಮಂತ್ರಿಗೆ ಸಲ್ಲಿಕೆಯಾಗುವುದು ಮತ್ತಷ್ಟು ವಿಳಂಬವಾಗಲಿದೆ. ಸೋಮವಾರ ಸಂಜೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಿದ್ದರು. ಆದರೆ, ಶಾಲೆ ಆರಂಭದ ಬಗ್ಗೆ ಎಲ್ಲ ರೀತಿಯ ಅಭಿಪ್ರಾಯ ಸಂಗ್ರಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿದ್ದರೂ ಶಿಕ್ಷಣ ಇಲಾಖೆ ಪಾಲಕರು ಮತ್ತು ಕೆಲವು ಖಾಸಗಿ ಶಾಲಾ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸದೇ ವರದಿ ಸಲ್ಲಿಕೆ ಮಾಡಿತ್ತು.
ಈ ಪಾಲಕ ಮತ್ತು ಖಾಸಗಿ ಸಂಘ – ಸಂಸ್ಥೆಗಳು ನಮ್ಮ ಅಭಿಪ್ರಾಯವನ್ನು ಸಹ ಸಂಗ್ರಹಿಸಬೇಕೆಂದು ಒತ್ತಾಯಿಸಿದ್ದರಿಂದ ನ.11ರಂದು ಬೆ.11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್  ಆರ್‌ಟಿಇ ಸ್ಟೂಡೆಂಟ್ಸ್ ಆ್ಯಂಡ್ ಪೇರೆಂಟ್ಸ್ ಅಸೋಸಿಯೇಷನ್, ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘದ ಅಧ್ಯಕ್ಷರೊಂದಿಗೆ ಸಭೆ ನಡೆಸಲು ಆಹ್ವಾನ ನೀಡಿದ್ದಾರೆ. ಈ ಸಭೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ತರಗತಿಗಳನ್ನು ಮತ್ತು ದಿನಾಂಕ ನಿಗದಿಪಡಿಸುವುದು, ಅಗತ್ಯ ಇರುವ ಸುರಕ್ಷತಾ ಕ್ರಮ, ಶಾಲೆ ನಡೆಯುವ ಅವಧಿ ಈ ಎಲ್ಲ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ.
ಇಲ್ಲಿ ವ್ಯಕ್ತವಾಗುವ ಅಭಿಪ್ರಾಯವನ್ನು ಸಹ ಸಂಗ್ರಹಿಸಿ ಆನಂತರ ಅದನ್ನು ವರದಿಯ ಜತೆಗೆ ಸೇರಿಸಿಕೊಳ್ಳುವಂತೆ ಸಲಹೆ ನೀಡಲಿದ್ದು, ಆನಂತರ ಅಂತಿಮ ವರದಿಯನ್ನು ಇಲಾಖಾ ಕಾರ್ಯದರ್ಶಿ ಶಿಕ್ಷಣ ಸಚಿವರಿಗೆ ನೀಡಲಿದ್ದಾರೆಂದು ತಿಳಿದು ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + three =
Remember me
