ರಾಯಚೂರು:ಹೊಸ ವರ್ಷಾಚರಣೆ ಹಿನ್ನಲೆ ರಾಜ್ಯವ್ಯಾಪಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿತ್ತು. 2024 ವರ್ಷವನ್ನು ಸ್ವಾಗತಿಸುವ ಉತ್ಸಾಹದಲ್ಲಿ ಜನರು ತೊಡಗಿದರೆ, ಇತ್ತ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಪುಸ್ತಕ, ಪೆನ್ನು ಹಿಡಿದು ತರಗತಿಯೊಳಗೆ ಪಾಠ ಕೇಳುವ ಬದಲು ಗನ್​, ಚಾಕು ಹಿಡಿದು ಪರಸ್ಪರ ಬಡಿದಾಡಿಕೊಂಡ ಘಟನೆ ರಾಯಚೂರಿನ ಖಾಸಗಿ ಶಾಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:6ಕ್ಕೆ ಎಲ್ 1 ಪಾಯಿಂಟ್ ತಲುಪಲಿರುವ ಆದಿತ್ಯ: ಇಸ್ರೋ ಮುಖ್ಯಸ್ಥ ಸೋಮನಾಥ್
ರಾಯಚೂರಿನ ಖಾಸಗಿ ಶಾಲೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದು, ಚಾಕು ಮತ್ತು ಏರ್​ ಗನ್​ ಅನ್ನು ತಮ್ಮಲ್ಲಿ ಇಟ್ಟುಕೊಂಡು ಸ್ಕೂಲ್​ಗೆ ಬಂದದ್ದನ್ನು ಕಂಡು ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿ ಬೆಚ್ಚಿ ಬಿದ್ದಿದೆ.
ಈ ಹಿಂದೆ ಇಬ್ಬರ ನಡುವೆ ನಡೆದಿದ್ದ ಜಗಳದ ಹಿನ್ನಲೆಯಲ್ಲಿ ಈ ಗಲಾಟೆ ಸಂಭವಿಸಿದ್ದು, 7 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಏರ್ ಗನ್ ತಂದಿದ್ದ 7ನೇ ತರಗತಿಯ ವಿದ್ಯಾರ್ಥಿ ಹಾಗೂ ಚಾಕು ತಂದಿದ್ದ 9ನೇ ತರಗತಿ ವಿದ್ಯಾರ್ಥಿ ನಡುವಿನ ಜಟಾಪಟಿಯಲ್ಲಿ 7ನೇ ತರಗತಿ ವಿದ್ಯಾರ್ಥಿಗೆ ಗಾಯವಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟ ರಾಯಚೂರು ನಗರದ ಪಶ್ಚಿಮ ಠಾಣೆ ಪೊಲೀಸರು, ಬಾಲಕನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
BBKS10: ಸಿರಿ ಪ್ರಕಾರ ಸೀಸನ್​ 10ರ ವಿನ್ನರ್​ ಇವರೇ ನೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
