ಬೆಂಗಳೂರು:ರಾಜ್ಯದಲ್ಲಿಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಶಿಕ್ಷಕರಿಗೆ ಯಾವುದೇ ಡ್ರೆಸ್​ಕೋಡ್ ಇಲ್ಲ. ಇದನ್ನು​ ಜಾರಿಗೊಳಿಸುವ ಬಗ್ಗೆ ಸೂಕ್ತವಾದ ಚರ್ಚೆ ನಡೆಸಿದ ಬಳಿಕವಷ್ಟೇ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಇದನ್ನೂ ಓದಿ:ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಖಂಡನೆ: ನಗರದಲ್ಲಿ ಜೈನ ಸಮುದಾಯದವರ ಪ್ರತಿಭಟನೆ
ವಿಧಾನ ಪರಿಷತ್​ನ ಅಧಿವೇಶನದ ಪ್ರಶ್ನೋತ್ತರ ವೇಳೆ ಕಾಂಗ್ರೆಸ್​ನ ಮಂಜುನಾಥ್​ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಕರ ಡ್ರೆಸ್​ ಬಗ್ಗೆ ರಾಜ್ಯದಲ್ಲಿ ನಿಯಮವಿಲ್ಲ. ಡ್ರೆಸ್​ಕೋಡ್​​ ಒಳ್ಳೆಯದು ಎನ್ನುವುದಾದರೆ ಈ ಕುರಿತು ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಡ್ರೆಸ್​ಕೋಡ್ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಯಾವುದೋ ಒಂದು ಪ್ರಕರಣವನ್ನ ಗುರಿಯಾಗಿಟ್ಟುಕೊಂಡು ಜಾರಿಗೆ ತರಲು ಆಗಲ್ಲ. ಆತುರಾತುರವಾಗಿ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.ಇದನ್ನೂ ಓದಿ:ರಸ್ತೆ ವಿಭಜಕ ದಾಟುವಾಗಿಲ್ಲ ಸುರಕ್ಷತೆ, ಜೀವ ಭಯದಲ್ಲೇ ವಾಹನ ಸವಾರರ ಸಂಚಾರ, ತಿರುವಿನಲ್ಲಿ ಇಲ್ಲ ರಕ್ಷಣಾ ಕವಚ
ಇನ್ನು ಶಿಕ್ಷಕರ ನೇಮಕಾತಿ ಕುರಿತು ಮಾತನಾಡಿದ ಅವರು, ನ್ಯಾಯಾಲಯದ ತಡೆಯಿರುವ ಕಾರಣ ನೇಮಕಾತಿ ಪತ್ರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಈ ಕುರಿತು ಕಾನೂನು ತಜ್ಞರ ಈ ಕುರಿತು ಚರ್ಚೆಯನ್ನು ನಡೆಸಲಾಗಿದೆ, ಶೀಘ್ರವೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ತಿಗೊಳಿಸಲಾಗುವುದು. ಜತೆಗೆ 900ಕ್ಕೂ ಹೆಚ್ಚು ವಿಶೇಷ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳುವುದರ ಜತೆಗೆ 306 ಸರ್ಕಾರಿ ಪ್ರೌಢ ಶಾಲೆಗಳ ಮೇಲ್ದರ್ಜೆಗೆ ಏರಿಸಿಲಾಗುವುದು ಎಂದು ಹೇಳಿದ್ದಾರೆ.   ​
ಆರ್ಥಿಕ ಇಲಾಖೆಯು 2015ಕ್ಕಿಂತ ಮುಂಚೆಯ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ಅನುದಾನಿತ ಪ್ರೌಢಶಾಲೆಗಳಲ್ಲಿ ಪ್ರಸ್ತುತ 4,783 ಖಾಲಿ ಹುದ್ದೆಗಳಿದ್ದು, 3,794 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
