ಬೆಂಗಳೂರು:ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 31ರಂದು ಶಾಲಾ ಪ್ರಾರಂಭೋತ್ಸವವನ್ನು ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಇದಕ್ಕೆ ಪೂರಕವಾಗಿ ಮೇ 29 ಮತ್ತು 30ರಂದು ಶಾಲೆಗಳನ್ನು ಸ್ವಚ್ಛಗೊಳಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದೆ.
ಶಿಕ್ಷಣ ಇಲಾಖೆಯು 2023-24ನೇ ಸಾಲಿನ ಮಾರ್ಗಸೂಚಿ ಪ್ರಕಟಿಸಿದ್ದು, ಇದರಲ್ಲಿ ವರ್ಷಪೂರ್ತಿ ಶಿಕ್ಷಕರು ಮಾಡಬೇಕಿರುವ ಕಾರ್ಯ ಮಾಹಿತಿ ನೀಡಿದೆ.
2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆ, ಪರೀಕ್ಷೆಗಳು ಮುಕ್ತಾಯಗೊಂಡ ಬಳಿಕ ಏ.11ರಿಂದ ಮೇ 28ರ ವರೆಗೆ ರಾಜ್ಯಾದ್ಯಂತ ಶಾಲೆಗಳಿಗೆ ಸುಮಾರು ಎರಡು ತಿಂಗಳ ಬೇಸಿಗೆ ರಜೆ ನೀಡಲಾಗಿತ್ತು. ಇದೀಗ ರಜೆ ಮುಕ್ತಾಯಗೊಂಡಿದ್ದು ಮಂಗಳವಾರ ಮತ್ತು ಬುಧವಾರ ಪ್ರತಿ ತರಗತಿ ಕೊಠಡಿ, ಆವರಣ, ಆಟದ ಮೈದಾನ, ಗ್ರಂಥಾಲಯ ಸೇರಿ ಇಡೀ ಶಾಲೆಯನ್ನು ಸ್ವಚ್ಚಗೊಳಿಸಬೇಕು. ಮಕ್ಕಳು ತರಗತಿಯಲ್ಲಿ ಕೂತು ಪಾಠ ಕೇಳಲು ಆರೋಗ್ಯಕರ ರೀತಿಯಲ್ಲಿ ಶಾಲೆಯನ್ನು ಸಜ್ಜುಗೊಳಿಸಬೇಕು.
ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್ ಸೇರಿದಂತೆ ಶಾಲೆಯ ಯಾವುದೇ ಭಾಗ ಮಳೆ ಮತ್ತಿತರ ಕಾರಣದಿಂದ ಹಾನಿಯಾಗಿದ್ದರೆ ಅವುಗಳ ದುರಸ್ಥಿಗೆ ಕ್ರಮ ವಹಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಇಲಾಖೆಯು ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.
ಇದನ್ನೂ ಓದಿ:ನಾನು ಕಾಂಗ್ರೆಸ್​​ಗಿಂತ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುತ್ತೇನೆ: ಜನಾರ್ದನ ರೆಡ್ಡಿ
ಪ್ರತಿ ಶಾಲೆಯಲ್ಲೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ನಡೆಸಿ ಪ್ರಾರಂಭೋತ್ಸವ ಹೇಗೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಬೇಕು. ಶಾಲಾ ವೇಳಾಪಟ್ಟಿ, ವಿಷಯವಾರು ಕ್ರಿಯಾ ಯೋಜನೆ, ಶಿಕ್ಷಕರ ವೇಳಾಪಟ್ಟಿ, ಶಾಲಾಭಿವೃದ್ಧಿ ಯೋಜನೆ, ಶಾಲಾ ವಾರ್ಷಿಕ ಕ್ಯಾಲೆಂಡರ್ ಸಿದ್ಧಪಡಿಸಿಕೊಳ್ಳಬೇಕು. ಮುಖ್ಯ ಶಿಕ್ಷಕರು ಶಿಕ್ಷಕರೊಂದಿಗೆ ಸಭೆ ನಡೆಸಿ ವಿವಿಧ ಕಾರ್ಯಭಾರಗಳ ಹಂಚಿಕೆ ಮಾಡಬೇಕು.
ಮೇ 31ರಂದು ಶಾಲೆ ಆರಂಭದ ದಿನ ತಳಿರು ತೋರಣಗಳಿಂದ ಶಾಲೆಯನ್ನು ಸಿಂಗರಿಸಿ ಮಕ್ಕಳಿಗೆ ಗುಲಾಬಿ ಹೂ, ಚಾಕಲೇಟ್ ಅಥವಾ ಇನ್ಯಾವುದೇ ಸಿಹಿ ನೀಡಿ ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಒಂದು ಸಿಹಿ ತಿನಿಸು ತಯಾರಿಸಿ ಮಕ್ಕಳಿಗೆ ಬಡಿಸಬೇಕೆಂದು.
. ಮೊದಲ ದಿನದಿಂದಲೇ ಕಳೆದ ಸಾಲಿನಲ್ಲಿ ಅರ್ಧಕ್ಕೆ ಶಾಲೆಯಿಂದ ದೂರು ಉಳಿದ ಮಕ್ಕಳು, ಶಾಲೆಗೆ ಬಾರದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಾಲೆಯ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾತಾ ನಡೆಸಿ ಜಾಗೃತಿ ಮೂಡಿಸಬೇಕು ಎಂದು ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
