ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ದ್ವಿತಿಯ ದರ್ಜೆ ಸಹಾಯಕ ಹುದ್ದೆಗಳ (ಎಸ್‌ಡಿಎ) ನೇಮಕಾತಿಗೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಏ.30ರವರೆಗೂ ವಿಸ್ತರಿಸಿದೆ.
ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್​ ಕರ್ನಾಟಕ ಮೀಸಲು ಸೇರಿ ಸೇರಿ ಒಟ್ಟು 1,279 ಎಸ್‌ಡಿಎ ನೇಮಕಾತಿ ಕುರಿತು ಫೆ.29ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮಾ.9ರಿಂದ ಏ.9ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಶುಲ್ಕ ಪಾವತಿಗೆ ಏ.13ರವರೆಗೆ ಅವಕಾಶ ನೀಡಿತ್ತು. ಆದರೆ, ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂಕಷ್ಟ ಎದುರಾಗಿರುವುದರಿಂದ ಕೊನೇ ದಿನಾಂಕವನ್ನು ಏಪ್ರಿಲ್​ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಶುಲ್ಕ ಪಾವತಿಸಲು ಮೇ 2ರವರೆಗೆ ಅವಕಾಶ ಕಲ್ಪಿಸಿದೆ.
ದ್ವಿತೀಯ ಪಿಯುಸಿ ಪಾಸಾದವರು ಹಾಗೂ ತತ್ಸಮಾನ ವಿದ್ಯಾರ್ಹತೆ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ- ಜೂನ್ 6 ರಂದು ನಡೆಸಲು ಉದ್ದೇಶಿಸಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 7 ರಂದು ನಡೆಯಲಿದೆ. ವಿವರಗಳಿಗೆ : http://kpsc.kar.nic.in/ ಸಂಪರ್ಕಿಸಬಹುದು.
ಭರ್ಜರಿ ಹನಿಮೂನ್​!- ಐಷಾರಾಮಿ ರೆಸಾರ್ಟ್​ನಲ್ಲಿ ಇರೋದು ಇದೊಂದೇ ಜೋಡಿ- 6 ದಿನಕ್ಕೆ ಬಂದವರೀಗ 26 ದಿನ ಇರುವಂತಾಗಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 2 =
Remember me
