ಮಂಗಳೂರು:ಮಳಲಿ ಮಸೀದಿಯ ಒಂದು ಹಿಡಿ ಮರಳನ್ನೂ ಕೊಡಲಾರೆವು. ಮಸೀದಿ ಬಿಟ್ಟುಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ಮಳಲಿ ಮಸೀದಿ ವಿಚಾರದಲ್ಲಿ ಮಾತಾಡದಂತೆ ತಮ್ಮ ಶಾಸಕರಿಗೆ ಡಿಕೆಶಿ ಹೇಳಿದ್ದಾರೆ. ಕಾಂಗ್ರೆಸ್ ಮುಸ್ಲಿಮರ ಪರ ಅಲ್ಲ ಅನ್ನೋದನ್ನು ತಿಳಿದುಕೊಳ್ಳಿ. ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು ಎಂದು ಮಂಗಳೂರಿನಲ್ಲಿ ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ನಾಲಗೆ ಹರಿಬಿಟ್ಟಿದ್ದಾರೆ.
ಕಣ್ಣೂರಿನಲ್ಲಿ ನಡೆದ ಎಸ್​ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ‘ಪೂಜಾ ಸ್ಥಳ ಕಾಯ್ದೆ 1991’ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆ್ಯಕ್ಟ್ ಅನ್ನು ಪೊಲೀಸರು ಓದಿಲ್ವೇ? 2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ… ಸಂಘ ಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ. ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ… ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆಗೆ ಮಾರ್ಚ್ ಮಾಡಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ನವೀಕರಣಕ್ಕಾಗಿ ಮಂಗಳೂರು ಹೊರವಲಯದ ದರ್ಗಾವನ್ನು ಕೆಡವಿದಾಗ ಕಳೆದ ತಿಂಗಳು ಹಿಂದು ದೇವಸ್ಥಾನ ಹೋಲುವ ಮಾದರಿ ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ವಿಶ್ವ ಹಿಂದೂ ಪರಿಷತ್, ಜಾಗದ ಧಾರ್ಮಿಕ ಮಹತ್ವ ತಿಳಿಯಲು ನಿರ್ಧರಿಸಿದೆ. ಇದಕ್ಕಾಗಿ ಮೇ 25ರಂದು ತಾಂಬೂಲ ಪಶ್ನೆ ಕೇಳಿದ್ದು, ಕೇರಳದ ಗೋಪಾಲಕೃಷ್ಣ ಪೊದುವಾಳ್ ಅವರು ತಾಂಬೂಲ ಪ್ರಶ್ನೆಯ ಮೂಲಕ ಉತ್ತರಿಸಿದ್ದಾರೆ. ಇದರಲ್ಲಿ ಕೆಲವೊಂದು ಮಹತ್ವದ ಸುಳಿವು ಸಿಕ್ಕಿದೆ. ಈ ಪ್ರಶ್ನೆಯಲ್ಲಿ ಸಿಕ್ಕಿರುವ ಮಹತ್ವದ ಸುಳಿವು ಎಂದರೆ ಈ ಜಾಗದಲ್ಲಿ ಹಿಂದೆ ದೇವಾಲಯವಿತ್ತು. ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ. ವಿವಾದದಿಂದ ದೇವಾಲಯ ನಾಶಪಡಿಸಲಾಗಿದೆ, ದೇವಸ್ಥಾನ ಮರುಸ್ಥಾಪಿಸಬೇಕೆಂದು ಎಂದು ಪ್ರಶ್ನೆಯಲ್ಲಿ ಉತ್ತರ ಸಿಕ್ಕಿದೆ.
ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ವಿವಾದದಿಂದಾಗಿ ದೇವಾಲಯ ನಾಶಪಡಿಸಿ, ಮಸೀದಿ ಕಟ್ಟಲಾಗಿದೆ. ದೇವಾಲಯವನ್ನು ಮರುಸ್ಥಾಪಿಸಬೇಕಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ಅವರು ಹೇಳಿದ್ದಾರೆ. ಇದೀಗ ಈ ಜಾಗದ ಮಾಲಕತ್ವ ಹೊಂದಿರುವವರೂ ಸೇರಿದಂತೆ ಎಲ್ಲರೂ ಒಟ್ಟಾಗಿ ಜೀರ್ಣೋದ್ಧಾರ ಮಾಡಬೇಕು. ಇಲ್ಲದಿದ್ದರೆ ಊರಿಗೆ ಗಂಡಾಂತರವಿದೆ. ಈ ಪ್ರದೇಶದಲ್ಲಿ ಶಿವಕಲೆಯಿದೆ. ಅಲ್ಲಿ ಶಿವಸಾನಿಧ್ಯವಿದೆ. ಇದರ ಆರಾಧನೆ ಮಾಡಿದ ಪೂರ್ವಿಕರ ಮನೆಯಲ್ಲಿ ಈಗಲೂ ಪೂಜೆ ಮಾಡಲಾಗುತ್ತಿದೆ ಎಂದಿದ್ದಾರೆ.
ಗಂಜೀಮಠ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಪೇಟೆಯಲ್ಲಿರುವ ಜುಮಾ ಮಸೀದಿ ಕಟ್ಟಡಕ್ಕೆ ಹೊಂದಿಕೊಂಡ ಅಸ್ಸಯ್ಯಿದ್​ ಅಬ್ದುಲ್ಲಾಹಿಲ್​ ಮದನಿ(ಐ.ಸಿ) ದರ್ಗಾ ಶರೀಫ್​ನಲ್ಲಿ ದೇವಳ ಮಾದರಿ ಪತ್ತೆಯಾಗಿದೆ. ಮಸೀದಿ ಮತ್ತು ದರ್ಗಾವನ್ನು ಹೊಸದಾಗಿ ನಿರ್ಮಿಸುವ ಉದ್ದೇಶದಿಂದ ಕೆಲ ದಿನಗಳ ಹಿಂದೆ ಹಳೆಯ ದರ್ಗಾವನ್ನು ಕೆಡವಿದಾಗ ದೇಗುಲ ಮಾದರಿ ರಚನೆ ಕಂಡುಬಂದಿದೆ. ಒಳಗಡೆ ಗುಡಿ ಕಂಡು ಬಂದಿದ್ದು, ಅದನ್ನು ಕೆಡವದೆ ಹಾಗೆಯೇ ಬಿಡಲಾಗಿದೆ. ಗುಡಿಯ ಕಲಶ, ತೋಮರ, ಕಂಬಗಳಿಗೆ ಯಾವುದೇ ಹಾನಿಯಾಗಿಲ್ಲ. ಈ ಜಾಗ ಮಸೀದಿಯೋ, ದೇಗುಲವೋ, ಜೈನ ಬಸದಿಯೋ ಎಂದು ಅರಿಯುವ ಕೆಲಸದಲ್ಲಿ ಹಿಂದೂಪರ ಸಂಘಟನೆ ತಲ್ಲೀನವಾಗಿದೆ.
ಮಂಗಳೂರಿನ ಮಳಲಿಯಲ್ಲಿ ದೇಗುಲ ಕೆಡವಿ ಮಸೀದಿ ನಿರ್ಮಿಸಿದ್ರಾ?ತಾಂಬೂಲ ಪ್ರಶ್ನೆಯಲ್ಲಿ ಸಿಕ್ಕ ಉತ್ತರವೇನು?

ಮಂಗಳೂರಿನ ದರ್ಗಾದಲ್ಲಿ ದೇವಸ್ಥಾನ ಹೋಲುವ ಮಾದರಿ ಪತ್ತೆ: ಮಸೀದಿ ಹಳೇ ಕಟ್ಟಡ ಕೆಡವಿದಾಗ ಬೆಳಕಿಗೆ

ಕೆಜಿಎಫ್​ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
