ಬೆಂಗಳೂರು:ಮೀನುಗಾರರ ಮೇಲೆ ವಿಶೇಷ ಕಾಳಜಿ ವಹಿಸಿರುವ ರಾಜ್ಯ ಕಾಂಗ್ರೆಸ್​ಸರ್ಕಾರ, ಮೀನುಗಾರರ ರಕ್ಷಣೆಗೆಂದೇ ಸಮುದ್ರ ಆಂಬ್ಯುಲೆನ್ಸ್​ ಯೋಜನೆಯನ್ನು ಬಜೆಟ್​ ಮಂಡನೆ ವೇಳೆ ಘೋಷಿಸಿದೆ.
ಇಂದು 15ನೇಯ ದಾಖಲೆ ಬಜೆಟ್​ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷವಾಗಿ 3 ಸಾವಿರ ಕೋಟಿ ರೂಪಾಯಿ ಯೋಜನೆಯನ್ನು ಘೋಷಣೆ ಮಾಡಿದರು.
ಸಮುದ್ರದಲ್ಲಿ ಮೀನುಗಾರಿಕೆಯನ್ನು ನೆಚ್ಚಿಕೊಂಡಿರುವ ಮೀನುಗಾರರ ರಕ್ಷಣೆಗೆ ವಿಶೇಷ ಗಮನ ವಹಿಸಲಾಗುವುದು. ಯಾವುದೇ ತುರ್ತು ಸಂದರ್ಭಗಳಲ್ಲಿ ಮೀನುಗಾರರ ಜೀವ ಉಳಿಸಲು ಅತ್ಯಾಧುನಿಕ ಸಮುದ್ರ ಆಂಬ್ಯುಲೆನ್ಸ್​ ಖರೀದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಉತ್ತರ ಕನ್ನಡದ ಹೊನ್ನಾವರ ಅಥವಾ ಕಾಸರಗೋಡಿನಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಶಿವಮೊಗ್ಗದ ಭದ್ರಾವತಿಯಲ್ಲಿ ಅತ್ಯಾಧುನಿಕ​ ಮೀನು ಮಾರುಕಟ್ಟೆಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಬಜೆಟ್ 2024: ಮದ್ಯ ಪ್ರಿಯರಿಗೆ ಶಾಕ್! ಬಿಯರ್​ ದರದಲ್ಲಿ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಚುನಾವಣೆ ಗಿಮಿಕ್‌ ಅಲ್ಲ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
