ಬೆಂಗಳೂರು:ದಿನೇದಿನೆ ಕೊವಿಡ್​-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣಕ್ಕೆ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲೂ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳು ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಹಾಸಿಗೆ ಇಲ್ಲ ಎಂದು ಹಿಂದೆ ಕಳಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.
ಅಷ್ಟೇ ಅಲ್ಲ, ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್​ ಕೇಸ್ ದಾಖಲಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಅವರು ಖಡಕ್​ ಆಗಿ ಹೇಳಿದ್ದಾರೆ.ಇದನ್ನೂ ಓದಿ:ಲೈಂಗಿಕ ಸಂಪರ್ಕಕ್ಕೆ ಒಪ್ಪದ ಸ್ವಚ್ಛತಾ ಕಾರ್ಮಿಕಳನ್ನು ಪತ್ನಿಗೆ ಹೇಳಿ ಕೆಲಸದಿಂದ ತೆಗೆಸಿದ ಕಾಮುಕ…
ಇಷ್ಟಾದರೂ ಬೆಂಗಳೂರಿನ ಎರಡು ಆಸ್ಪತ್ರೆಗಳು ಸರ್ಕಾರವೇ ಶಿಫಾರಸು ಮಾಡಿದ ಕೊವಿಡ್​-19 ರೋಗಿಗಳಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಿವೆ. ಕೊವಿಡ್​-19 ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದ ವಿಕ್ರಮ್​ ಆಸ್ಪತ್ರೆ ಮತ್ತು ಸಾಗರ್​ ಅಪೊಲೋ ಆಸ್ಪತ್ರೆಗಳಿಗೆ ದಿಢೀರ್​ ಕೊಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ. ಸರ್ಕಾರದ ಆದೇಶಗಳನ್ನು ಪಾಲನೆ ಮಾಡದೆ ಇದ್ದರೆ, ಆಸ್ಪತ್ರೆಗಳನ್ನು ಸೀಲ್​ಡೌನ್​ ಮಾಡುವುದಾಗಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ರೆಫರ್ ಮಾಡಿದ ಕೋವಿಡ್-19 ರೋಗಿಗಳಿಗೆ ಪ್ರವೇಶ ನಿರಾಕರಿಸಿದ ವಿಕ್ರಮ್ ಆಸ್ಪತ್ರೆ ಹಾಗೂ ಸಾಗರ್ ಅಪೋಲೋ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ಕೊಟ್ಟ ಆರೋಗ್ಯ ಇಲಾಖೆಯ ಅಧಿಕಾರಿಗಳು ನೊಟೀಸ್ ನೀಡಿದರು. ಸರ್ಕಾರದ ಆದೇಶಗಳನ್ನು ನಿರ್ಲಕ್ಷಿಸಿದಲ್ಲಿ ಆಸ್ಪತ್ರೆಗಳನ್ನು ಸೀಲ್-ಡೌನ್ ಮಾಡುವ ಎಚ್ಚರಿಕೆ ನೀಡಲಾಯಿತು.pic.twitter.com/SBendiOjYe
— K'taka Health Dept (@DHFWKA)July 13, 2020

ನಾಳಿನ ಸಿಎಲ್​ಪಿ ಸಭೆಗೆ ದಯವಿಟ್ಟು ಬನ್ನಿ..: ಸಚಿನ್​ ಪೈಲಟ್​ಗೆ ಲಿಖಿತ ಮನವಿ ಕಳಿಸಿದ ಕಾಂಗ್ರೆಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 20 =
Remember me
