ಬೆಂಗಳೂರು:ಲೋಕಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಜೆಡಿಎಸ್‌ನಲ್ಲೂ ಸೀಟು ಹಂಚಿಕೆಯ ಅಂತಿಮ ಹಂತದ ಕುತೂಹಲ ಮನೆ ಮಾಡಿದೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಜೆಡಿಎಸ್‌ಗೆ ರಾಜ್ಯದಲ್ಲಿ ಬಿಟ್ಟುಕೊಡಬಹುದಾದ ಸೀಟುಗಳ ಬಗ್ಗೆ ಚರ್ಚೆಯಾಗಲಿದೆ. ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಅಥವಾ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಭಾನುವಾರವೇ ನವದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್‌ಗೆ ಯಾವ ಸೀಟು ಬಿಟ್ಟುಕೊಡಬೇಕು ಎಂಬ ಬಗ್ಗೆ ಬಿಜೆಪಿ ನಾಯಕರು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಜೆಡಿಎಸ್‌ಗೆ ಎರಡು, ಮೂರು, ನಾಲ್ಕು ಕ್ಷೇತ್ರಗಳೆಂಬುದು ಊಹಾಪೋಹ ಮಾತ್ರ. ಜೆಡಿಎಸ್‌ನ ಕಾರ್ಯ ಚಟುವಟಿಕೆಗಳನ್ನು ಗಮನಿಸಿದರೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳು ಬಹುತೇಕ ಫಿಕ್ಸ್ ಎಂಬಂತಿದೆ.
ಈಗಾಗಲೇ ಈ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ.
ಈಗಾಗಲೇ 195 ಕ್ಷೇತ್ರಗಳಿಗೆ ಟಿಕೆಟ್ ೋಷಣೆ ಮಾಡಿರುವ ಬಿಜೆಪಿ, ಈಗ ಎರಡನೇ ಹಂತದಲ್ಲಿ ಮೈತ್ರಿ ಪಾಲುದಾರ ಪಕ್ಷಗಳಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ಆರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಸೀಟು ಹಂಚಿಕೆ ಪ್ರಕ್ರಿಯೆ ಕೂಡ ನಡೆಯಲಿದೆ.
ಬಿಜೆಪಿ ಮೂಲಗಳ ಪ್ರಕಾರ ಜೆಡಿಎಸ್‌ಗೆ 3ಕ್ಕಿಂತ ಹೆಚ್ಚು ಸೀಟು ಬಿಟ್ಟುಕೊಡುವುದಿಲ್ಲ. ಹಾಸನ, ಮಂಡ್ಯ, ಕೋಲಾರ ಬಹುತೇಕ ಖಚಿತವಾಗಿವೆ. ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸಲು ವರಿಷ್ಠರು ಉತ್ಸುಕತೆ ತೋರಿದ್ದಾರೆ. ಜೆಡಿಎಸ್‌ನಲ್ಲೂ ಇದಕ್ಕೆ ಸಮ್ಮತಿ ಇದೆ. ಹೀಗಾಗಿ ಕುಮಾರಸ್ವಾಮಿ ಮೂರಕ್ಕಿಂತ ಹೆಚ್ಚು ಸೀಟಿಗಾಗಿ ಚೌಕಾಶಿ ಮಾಡುವುದು ಡೌಟು ಎನ್ನಲಾಗುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ತರಹೇವಾರಿ ಚರ್ಚೆಗಳು ನಡೆಯುತ್ತಿವೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಒತ್ತಡ ಹೆಚ್ಚಿದೆ. ಈ ನಡುವೆ ಮಂಡ್ಯ ಸಂಸದೆ ಸುಮಲತಾ ಚುನಾವಣಾ ಕಣದಿಂದ ಒಂದು ಹೆಜ್ಜೆ ಹಿಂದೆ ಇಟ್ಟಂತೆ ಮಾತನಾಡಿರುವುದು ಜೆಡಿಎಸ್ ಹಾದಿಯನ್ನು ಮತ್ತಷ್ಟು ಸುಲಲಿತಗೊಳಿಸಿದೆ. ಹಾಗಾಗಿ ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:16 − 5 =
Remember me
