ಬೆಂಗಳೂರು:ಸ್ವಾವಲಂಬಿ ಭಾರತ ಆರ್ಥಿಕ ಪುನಶ್ಚೇತನ ಯೋಜನೆಯ ಅಂಗವಾಗಿ ಗುರುವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಡಿದ ಘೋಷಣೆಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಈ ಘೋಷಣೆಗಳು ಬಿಂಬಿಸುತ್ತವೆ. ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ರೈತರು, ಕೂಲಿ ಕಾರ್ಮಿಕರು ಮೊದಲಾದ ಎಲ್ಲ ಸಮುದಾಯಗಳಿಗೆ ಮೂಲಸೌಲಭ್ಯ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಶ್ಲಾಘನೀಯ ಎಂದು ಹೇಳಿದ್ದಾರೆ.
ಇದನ್ನೂ ಓದಿಸರ್ಕಾರಕ್ಕೆ ಹತ್ತೇ ದಿನಗಳಲ್ಲಿ 1200 ಕೋಟಿ ರೂ. ‘ಕೊಡುಗೆ’ ಕೊಟ್ಟ ಕುಡುಕರು!
ರಾಜ್ಯ ಮತ್ತು ಪ್ರಾಂತೀಯ ವಲಯದಲ್ಲಿ ಇರುವ ಕನಿಷ್ಠ ವೇತನ ತಾರತಮ್ಯವನ್ನು ತೆಗೆದು ಹಾಕುವುದು ಊರುಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ವರದಾನವಾಗಲಿದೆ. ಕೋಟಿ ವಲಸಿಗ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ 3500 ಕೋಟಿ ರೂ. ವೆಚ್ಚದಲ್ಲಿ ಉಚಿತ ಪಡಿತರ ವಿತರಣೆ, ವಲಸೆ ಕಾರ್ಮಿಕರಿಗೆ ಮನೆ ಬಾಡಿಗೆ ದರ ನಿಗದಿ ಮೊದಲಾದ ಕ್ರಮಗಳು ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುದ್ರಾ ಶಿಶು ಸಾಲ ಯೋಜನೆಗೆ ಬಡ್ಡಿ ರಿಯಾಯಿತಿ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೆ ವಿಶೇಷ ಸಾಲ ಸೌಲಭ್ಯ ಒದಗಿಸಲು 5 ಸಾವಿರ ಕೋಟಿ ಅನುದಾನ ನಿಗದಿ ಪಡಿಸಿರುವುದು ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.
ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಗೃಹ ಸಾಲ ಸಬ್ಸಿಡಿ ಯೋಜನೆಗೆ 70 ಸಾವಿರ ಕೋಟಿ ರೂ. ನೆರವು ಈ ವರ್ಗದ ಜನರ ಕನಸು ಸಾಕಾರಗೊಳಿಸಲು ನೆರವಾಗಲಿದೆ ಎಂದು ಶ್ಲಾಘಿಸಿದ್ದಾರೆ.
ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಬೇಡ ಎಂದ ಮಂತ್ರಿಗಳು: ಸಿಎಂ ಏನು ಮಾಡ್ತಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 15 =
Remember me
