ಬೆಂಗಳೂರು:ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬುಧವಾರ ಆರಂಭವಾಗಲಿದ್ದು,ಈ ಬಾರಿ ಒಟ್ಟು1,016ಕೇಂದ್ರಗಳಲ್ಲಿ6,80,049ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. 2, 16,930ವಿದ್ಯಾರ್ಥಿಗಳು ವಿಜ್ಞಾನ ವಿಭಾಗ, 2,61,674ವಾಣಿಜ್ಯ ವಿಭಾಗ ಮತ್ತು2,01,445ಕಲಾ ವಿಭಾಗದ ವಿದ್ಯಾರ್ಥಿಗಳಿದ್ದಾರೆ.ಒಟ್ಟಾರೆ ವಿದ್ಯಾರ್ಥಿಗಳಲ್ಲಿ3,41,618ಬಾಲಕಿಯರಿದ್ದರೆ,ಬಾಲಕರ ಸಂಖ್ಯೆ3,38,431ಎಂದು ಪಿಯು ಇಲಾಖೆ ತಿಳಿಸಿದೆ.
ನಿಯಂತ್ರಣ ಘಟಕ:ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದು ನಿಯಂತ್ರಣ ಘಟಕ ಆರಂಭಿಸಲಾಗುತ್ತದೆ.ಈ ಸಲದಿಂದ ಕೈಗೊಳ್ಳಲಾಗುತ್ತಿರುವ ವಿಶೇಷ ಕ್ರಮ ಇದಾಗಿದೆ.ಗೌಪ್ಯ ವಸ್ತುಗಳನ್ನು ನಿರ್ವಹಿಸಲು ಇದು ನೆರವಾಗಲಿದೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಘಟಕವಿರಲಿದ್ದು,ಬೆಂಗಳೂರಿನ ಕೇಂದ್ರ ಕಚೇರಿಯೊಂದಿಗೆ ನೇರ ಸಂಪರ್ಕ ಹೊಂದಿರುತ್ತದೆ.ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಿರ್ವಹಿಸಲು ಇದು ನೆರವಾಗಲಿದೆ.ಈವರೆಗೆ ಒಟ್ಟು35,156ಮೌಲ್ಯಮಾಪಕರು ಹೆಸರು ನೋಂದಣಿ ಮಾಡಿಕೊಂಡಿದ್ದು,ಸಿಇಟಿ ಫಲಿತಾಂಶ ಪ್ರಕಟಗೊಂಡ ಕೂಡಲೇ ಪಿಯುಸಿ ಫಲಿತಾಂಶ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋರಿಕೆ ತಡೆಗೆ ಕ್ರಮ:ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು.ಇಂಥ ಘಟನೆ ನಡೆಯದಂತೆ ತಡೆಗಟ್ಟಲುಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.ಅಕ್ರಮಗಳಲ್ಲಿ ಭಾಗಿಯಾದವರಿಗೆ5ಲಕ್ಷ ರೂ.ದಂಡ ಹಾಗೂ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ಬಂದೋಬಸ್ತ್ ಒದಗಿಸಲು ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.
ಉಪನ್ಯಾಸಕರ ಪ್ರತಿಭಟನೆ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಕಪ್ಪುಪಟ್ಟಿ ಧರಿಸಿ ಪರೀಕ್ಷೆ ನಡೆಸಿಕೊಡಲು ನಿರ್ಧರಿಸಿದೆ.ಈ ಹಿಂದೆ ಪ್ರಥಮ ಪಿಯು ಪರೀಕ್ಷೆಗೆ ಕಪ್ಪುಪಟ್ಟಿ ಧರಿಸಿಕೊಂಡು ಪ್ರತಿಭಟನೆ ಮಾಡಿದ ರೀತಿಯನ್ನೇ ದ್ವಿತೀಯ ಪಿಯು ಪರೀಕ್ಷೆಗೂ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದೆ.ಬೇಡಿಕೆಯನ್ನು ಆಲಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್​ಕುಮಾರ್ ಸೋಮವಾರ ಉಪನ್ಯಾಸಕ ಮತ್ತು ಪ್ರಾಂಶುಪಾಲರ ಸಂಘದೊಂದಿಗೆ ಸಭೆ ನಡೆಸಿದರು.ಆದರೆ,ಈಡೇರಿಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಪ್ಪುಪಟ್ಟಿ ಧರಿಸಿ4ನೇ ಹಂತದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ತಿಳಿಸಿದ್ದಾರೆ.
ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು.ನಿಮ್ಮೆಲ್ಲರ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ.
— B.S.Yediyurappa (@BSYBJP)March 3, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
