ಬೆಂಗಳೂರು:ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪರೀಕ್ಷೆಗಳು ಏ.28ರಿಂದ ಮೇ 18ರವರೆಗೆ ನಡೆಯಲಿದ್ದು, ಕಾಲೇಜು ಹಂತದಲ್ಲೇ ನಡೆಸುವಂತೆ ತಮ್ಮ ಜಿಲ್ಲೆಯ ಪ್ರಾಂಶುಪಾಲರಿಗೆ ಸೂಚಿಸಬೇಕು. ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಅಂಕಗಳನ್ನು ಆನ್‌ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಎಲ್ಲ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಬೇಕು. ಈ ಮಾಹಿತಿ ಎಲ್ಲ ವಿದ್ಯಾರ್ಥಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆ, ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಂದ ಕರೊನಾ ಪರೀಕ್ಷೆಯ ವರದಿ ಪಡೆಯದೇ ಅವರಿಗೆ ಅವಕಾಶ ನೀಡಬೇಕು. ಈ ವೇಳೆ ಥರ್ಮಲ್ ಸ್ಕ್ಯಾನಿಂಗ್​ ಮಾಡುವುದು ಕಡ್ಡಾಯ ಎಂದೂ ನಿರ್ದೇಶನ ನೀಡಲಾಗಿದೆ.
ಇದನ್ನೂ ಓದಿ:ಪ್ರಿಯಕರನನ್ನು ಹುಡುಕಿಕೊಂಡು ರಾತ್ರಿಯೇ ಆತನ ಮನೆಗೆ ಹೋದ ಪ್ರೇಯಸಿ; ಆ ನಂತರ ನಡೆದಿದ್ದಂತೂ ಬೆಚ್ಚಿಬೀಳಿಸುವಂಥದ್ದು!
ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದ್ದು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಅವುಗಳನ್ನು ಪಡೆದುಕೊಳ್ಳಬೇಕು. ಕಾಲೇಜುವಾರು ನಾಮಿನಲ್ ರೋಲ್ ಮತ್ತು ಅಂಕಪಟ್ಟಿಗಳನ್ನು ಅನ್‌ಲೈನ್ ಮೂಲಕ ಪ್ರಾಯೋಗಿಕ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಮ್ಮ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಲಗತ್ತಿಸಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ನಾಮಿನಲ್ ರೋಲ್ ಮತ್ತು ಅಂಕಪಟ್ಟಿಯನ್ನುನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಂತಮ್ಮ ಕಾಲೇಜು ಹಂತದಲ್ಲೇ ನಡೆಸಿ ಅಯಾ ದಿನದಂದೇ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕಪಟ್ಟಿಗಳನ್ನು ಹಿಂದಿರುಗಿಸಿ ಆನ್‌ಲೈನ್‌ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು. ಪರೀಕ್ಷೆ ಮುಗಿದ ಬಳಿಕ ಎಲ್ಲ ಉತ್ತರ ಪತ್ರಿಕೆಗಳನ್ನು ನೇರವಾಗಿ ಕೇಂದ್ರ ಕಚೇರಿಗೆ ಕಳುಹಿಸಬೇಕು. ವಿದ್ಯಾರ್ಥಿಗಳ ಹೊರತಾಗಿ ಬೇರೆಯವರಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಲಾಗಿದೆ.
ವಾರಾಂತ್ಯದಲ್ಲಿ ಲಾಕ್‌ಡೌನ್ ಇರುವುದರಿಂದ ಈ ವೇಳೆ ಪರೀಕ್ಷೆ ನಡೆಸಬಾರದು. ಈ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್. ಸ್ನೇಹಲ್ ರಾಜ್ಯದ ಎಲ್ಲ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಇಲ್ಲಿ ಸೋಂಕಿತರಿಗೆ ನೀಡುತ್ತಿದ್ದಾರೆ ಅವಧಿ ಮುಗಿದ ಔಷಧ!; ಶಾಸಕರಿಂದ ತೀವ್ರ ಆಕ್ಷೇಪ

ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಗಂಡ; ಎನ್​ಜಿಒನಿಂದಲೂ ಉಪಟಳ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − six =
Remember me
