ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶವನ್ನು ನಾಳೆ ಪ್ರಕಟಿಸಲಿದೆ.
ಇದನ್ನೂ ಓದಿ:‘ನಿತ್ಯ ಸುಮಂಗಲಿ’, ಪರಿಷತ್​ನಲ್ಲಿ ಕೋಲಾಹಲಕ್ಕೆ ಕಾರಣವಾದ ಎಂಎಲ್​ಸಿ ಸಿಟಿ ರವಿ ಹೇಳಿಕೆ
ಜುಲೈ 16ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅಧಿಕೃತ https://karresults.nic.in ವೆಬ್​​ ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷೆ ಐಎಎಸ್​ ಅಧಿಕಾರಿ ಎನ್​ ಮಂಜುಶ್ರೀ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 3 ಅನ್ನು 2024ರ ಜೂನ್‌ 24ರಿಂದ ಜುಲೈ 5ರವರೆಗೆ ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.
ಬೆಂಗಳೂರಲ್ಲಿ ಗುಂಡಿಮುಕ್ತ ರಸ್ತೆ: 1800 ಕೋಟಿ ರೂ ವೆಚ್ಚದ ವೈಟ್ ಟಾಪಿಂಗ್ ಯೋಜನೆ : ಡಿಸಿಎಂ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 2 =
Remember me
