ಬೆಂಗಳೂರು:ಮೇ/ಜೂನ್-2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು (ಜೂ.20) ಪ್ರಕಟವಾಗಿದೆ.
ಮೇ 23ರಿಂದ ಜೂ. 03ರವರೆಗೆ 304 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕಾ ಪರೀಕ್ಷೆ ನಡೆದಿತ್ತು. ಒಟ್ಟು 1,58,881 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 50,478 ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದಾರೆ.
ಇದನ್ನೂ ಓದಿ:ಭತ್ತ ಉತ್ಪಾದನೆಯಲ್ಲಿ ತೆಲಂಗಾಣ ಪ್ರಥಮ: ಸಿಎಂ ಚಂದ್ರಶೇಖರ ರಾವ್ ಹೇಳಿಕೆ
ಇಂದು 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್​ ಮಾಡಲಾದ ಪ್ರತಿಗಳು, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸಲು ಬಯಸುವವರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಜೂ. 20 ರಿಂದ ಜೂ. 26ರ ಒಳಗೆ ಸಲ್ಲಿಸಬೇಕು. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ದಿನಾಂಕ 24-06-2023 ರಿಂದ ದಿನಾಂಕ 28-06-2023 ರವರೆಗೆhttps://kseab.karnataka.gov.inಅಂತರ್ಜಾಲದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಸ್ಕ್ಯಾನಿಂಗ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಜೂ. 24 ರಿಂದ ಜೂ. 30ರವರೆಗೆ ಅವಕಾಶವಿರುತ್ತದೆ. ಸ್ಕ್ಯಾನಿಂಗ್​ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಹಾಗೂ ಹಾಗೂ ಮರುಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂ. ವಿಧಿಸಲಾಗಿದೆ.

ನಿಮ್ಮ ಒತ್ತಡ, ಕಿರುಕುಳ ನಿಭಾಯಿಸುವ ಶಾಂತಿ ಮಂತ್ರ ಕಲಿತು ಬರುತ್ತೇನೆ: ರಜೆ ಕೋರಿ ಪೊಲೀಸ್​ ಅಧಿಕಾರಿ ಬರೆದ ಪತ್ರ ವೈರಲ್​

ಚಿಲ್ಲರೆ ಖಾತೆ ಯಾವುದೆಂದು ಮೋದಿ ಹತ್ರ ಕೇಳಲಿ! ಪ್ರತಾಪ್ ಸಿಂಹ ವಿರುದ್ದ ಕಿಡಿಕಾರಿದ ಎಂ.ಬಿ.ಪಾಟೀಲ್

ಬೆಳಗ್ಗಿನಿಂದಲೇ ಚುರುಕುಗೊಂಡ ಮುಂಗಾರು; ಬೆಂಗಳೂರು, ಕರಾವಳಿ ಸೇರಿ ರಾಜ್ಯದಾದ್ಯಂತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
